ವಿಜಯಪುರದಲ್ಲಿ ಲೋಕಾಯುಕ್ತ ದಾಳಿ
ವಿಜಯಪುರ,ಜು.19:ಯಾದಗಿರಿ ಜಿಲ್ಲೆಯ ಯೋಜನಾಧಿಕಾರಿಯ ವಿಜಯಪುರದ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಯಾದಗಿರಿ ಜಿಲ್ಲೆಯ ಯೋಜನಾಧಿಕಾರಿ ಬಲವಂತ ರಾಠೋಡ ಅವರ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆದಿದೆ. ವಿಜಯಪುರದ ಡಿಸಿಸಿ ಬ್ಯಾಂಕ್ ಹಿಂಬದಿಯ ಕೆ.ಸಿ. ರಸ್ತೆಯಲ್ಲಿ ಇರುವ ರಾಠೋಡ ಅವರ ನಿವಾಸದ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಮನೆಯಲ್ಲಿ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಅದೇ ರೀತಿ ಯಾದಗಿರಿ ಜಿಲ್ಲೆಯ ರಾಠೋಡ ಅವರ ಕಚೇರಿ ಮೇಲೂ ಏಕ ಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.