ಕೂಲಿ ಕಾರ್ಮಿಕರ ಕುಂದು ಕೊರತೆ ಆಲಿಕೆ
ಬಾಗಲಕೋಟೆ,ಜು19 : ತಾಲೂಕಿನ ಭಗವತಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ನರೇಗಾ ಕೂಲಿ ಕಾರ್ಮಿಕರ ಕುಂದು ಕೊರತೆ ಬಗ್ಗೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ವಿಚಾರಿಸಿದರು.
ಭಗವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕೂಲಿ ಕಾರ್ಮಿಕರ ಕುಂದು ಕೊರತೆಗಳನ್ನು ವಿಚಾರಿಸಿದರು. ಸರಿಯಾದ ಸಮಯಕ್ಕೆ ಕೂಲಿ ಪಾವತಿ ಬಗ್ಗೆ ವಿಚಾರಿಸಿದರು. ನಂತರ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಕೇಂದ್ರದಲ್ಲಿ ಮಕ್ಕಳಿಗೆ ನೀಡುವ ಆಹಾರ ಪದಾರ್ಥ ಪರೀಲಿಸಿ ಮಕ್ಕಳೊಂದಿಗೆ ಸಂವಾದ ಮಾಡಿದರು. ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಂವಾದ ನಡೆಸಿ ದಾಖಲಾತಿ ಪರಿಶೀಲನೆ ಮಾಡಿದರು.
ತಿಮ್ಮಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಮತ್ತು ಸರಕಾರಿ ಶಾಲೆಗೆ ಭೇಟಿ ನಂತರ ರಾಂಪೂರ ಗ್ರಾಮ ಪಂಚಾಯತಿ ರಾಂಪುರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪಿಯು ಕಾಲೇಜ ಹಾಗೂ ಪದವಿ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕಲಿಕಾ ಸಾಮಥ್ರ್ಯ ಮತ್ತು ಸ್ವಚ್ಚತೆ ಕುರಿತು ಚರ್ಚಿಸಿದರು.
ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ರೋಗಿಗಳ ದಾಖಲಾತಿ ಮತ್ತು ಚಿಕಿತ್ಸೆ ಔಷಧಿ ವಿತರಣೆ ಕುರಿತು ಪರಿಶೀಲನೆ ನಡೆಸಿ ಸುತ್ತುಗುಂಡಾರ ಗ್ರಾಮ ಪಂಚಾಯತಗೆ ಭೇಟಿ ನೀಡಿ ಪಂಚಾಯತ ದಾಖಲಾತಿಗಳನ್ನು ಪರಿಶೀಲನೆ ಮಾಡಿದರು. ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಔಷಧಿಗಳ ಪರಿಶೀಲನೆ ಮಾಡಿದರು.
ಭೇಟಿ ಸಮಯದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿ ಹೇಮಾವತಿ ಸೇರಿದಂತೆ ತಾಲೂಕಾ ಪಂಚಾಯತ ಸಹಾಯಕ ನಿರ್ದೇಶಕರು (ಗ್ರಾ.ಉ), ಸಂಬಂಧ ಪಟ್ಟ ತಾಲೂಕಧಿಕಾರಿಗಳು, ಪಂಚಾಯತ ಅಭಿವೃದ್ದಿ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತ ಸಿಬ್ಬಂದಿ ಇದ್ದರು.