ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ಮುಂದುವರಿಸಲು ವಿದ್ಯಾರ್ಥಿ ಪರಿಷತ್ ಆಗ್ರಹ
ಸಂಜೆವಾಣಿ ವಾರ್ತೆ,
ವಿಜಯಪುರ,ಜು.19 : ಉನ್ನತ ಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹ ಮುಂದುವರಿಸಲು ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಕ್ಷಯಕುಮಾರ ಅಜಮನಿ ಮಾತನಾಡಿ, ಮೊದಲ ಪ್ರಯತ್ನದಲ್ಲಿ ಪ್ರಥಮ ದರ್ಜೆ ಯಲ್ಲಿ ಎಸ್ ಎಸ್‍ಎಲ್‍ಸಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೆ ನೀಡಲಾಗುತ್ತಿದ್ದ ಪೆÇ್ರೀತ್ಸಾಹಧನವನ್ನು ರಾಜ್ಯ ಸರ್ಕಾರ ಯಾವುದೇ ಕಾರಣ ಇಲ್ಲದೆ ಏಕಾಏಕಿ ಸ್ಥಗಿತಗೊಳಿಸಿದೆ. ಅಲ್ಲದೇ, ಪಿಯು, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವೃತ್ತಿಪರ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪೆÇ್ರೀತ್ಸಾಹಧನ ನೀಡಲು ಕುಟುಂಬದ ವಾರ್ಷಿಕ ಆದಾಯ ಮಿತಿ ?6 ಲಕ್ಷ ಮೀರಿರಬಾರದು ಎಂಬ ಷರತ್ತು ವಿಧಿಸಿದೆ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. ಇಲ್ಲಿಯವರೆಗೂ ಈ ನಿಯಮ ಜಾರಿಯಲ್ಲಿ ಇರಲಿಲ್ಲ. ಆದರೆ ಚರ್ಚೆ ಇಲ್ಲದೆ ಕಡಿತ ಗೊಳಿಸಿರುವುದು ಅಪರಾಧ ಎಂದು ನಾವು ಭಾವಿಸುತ್ತೇವೆ ಎಂದರು.
ರಾಜ್ಯ ಸರ್ಕಾರ ತಕ್ಷಣವೇ ದಲಿತ ವಿರೋಧಿ ನೀತಿಯನ್ನು ಕೈಬಿಡಬೇಕು, ಮೊದಲನೇ ಯಥಾ ಸ್ಥಿತಿ ಮುಂದುವರಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಮುದಾಯದೊಂದಿಗೆ ಜೊತೆಗೂಡಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಈ ಸಂಧರ್ಭದಲ್ಲಿ ಮಾದೇಶ ಚಲವಾದಿ, ಗುರುಪ್ರಸಾದ ಬಿ.ಜಿ., ದಾವುದ ನಾಯ್ಕೋಡಿ, ಸಂದೇಶ ಕುಮುಟಗಿ, ಸುರೇಶ, ಯುವರಾಜ್, ಯಾಸಿನ್ ಮುಂತಾದವರು ಭಾಗಿಯಾಗಿದ್ದರು.