ಸರಿಯಾದ ಸಮಯಕ್ಕೆ ಬಸ್ ಬೀಡುವಂತೆ ವಿದ್ಯಾರ್ಥಿಗಳ ಆಗ್ರಹ
ಕೆಂಭಾವಿ :ಜು.19:ಪ್ರತಿನಿತ್ಯ ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಶಾಲಾ ಕಾಲೇಜು ವಿದ್ಯಾರ್ಥಿಗಳು ಗುರುವಾರ ಜೈನಾಪೂರ ಗ್ರಾಮದ ಸುರಪುರ-ಹುನಗುಂದ ರಾಜ್ಯ ಹೆದ್ದಾರಿ ಬಂದ್ ಮಾಡುವ ಮೂಲಕ ದಿಢೀರ್ ಪ್ರತಿಭಟನೆ ನಡೆಸಿದರು.
ಪಟ್ಟಣಕ್ಕೆ ದಿನನಿತ್ಯ ವಲಯದ ಹಲವು ಗ್ರಾಮಗಳಿಂದ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು ಶಿಕ್ಷಣ ಪಡೆಯಲು ಬರುತ್ತಿದ್ದು ಸುರಪುರ ಘಟಕದಿಂದ ಸರಿಯಾದ ಸಮಯಕ್ಕೆ ಬಸ್ ಓಡಿಸದೆ ನಿರ್ಲಕ್ಷ ವಹಸಿಉತ್ತಿದ್ದಾರೆ. ಇದರಿಂದ ನಮ್ಮ ಪಾಠಗಳಿಗೆ ಹಿನ್ನಡೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮುಂಜಾನೆ 8 ಗಂಟೆಗೆ ಹೊರಡುವ ಬಸ್ಸುಗಳು 10 ಗಂಟೆಯ ನಂತರ ಬರುತ್ತಿದ್ದು ಇದರಿಂದ ನಮ್ಮ ಶಾಲಾ ಕಾಲೇಜಿನ ವೇಳೆಯಲ್ಲಿ ವ್ಯತ್ಯಾಸವಾಗಿ ತೀವ್ರ ಹಿನ್ನಡೆಯಾಗುತ್ತಿದೆ. ಜೈನಾಪೂರ, ಕಿರದಳ್ಳಿ, ಹೆಗ್ಗಣದೊಡ್ಡಿ ಸೇರಿದಂತೆ ಹಲವು ಗ್ರಾಮಗಳು ಈ ರಾಜ್ಯ ಹೆದ್ದಾರಿ ಅಕ್ಕಪಕ್ಕದಲ್ಲಿ ಬರುತ್ತಿದ್ದು ಬಸ್ಸಿನ ಓಡಾಟವಿಲ್ಲದೆ ತೀವ್ರ ತೊಂದರೆಯಾಗಿದೆ ಕೂಡಲೆ ಎಲ್ಲ ಸಮಸ್ಯೆ ಬಗೆಹರಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವಂತೆ ಪಟ್ಟು ಹಿಡಿದರು. ಇದರಿಂದ ಕೆಲಕಾಲ ರಾಜ್ಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.
ಪ್ರತಿಭಟನೆ ಸುದ್ದಿ ತಿಳಿಯುತ್ತಲೆ ಸ್ಥಳಕ್ಕಾಗಮಿಸಿದ ಸಂಚಾರ ನಿಯಂತ್ರಕ ಸಿದ್ಧನಗೌಡ ಅವರು ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿ ಶೀಘ್ರದಲ್ಲೆ ಸರಿಯಾದ ಸಮಯಕ್ಕೆ ಬಸ್ ಓಡಾಟ ನಡೆಸುವಂತೆ ಕ್ರಮ ಕೈಗೊಳ್ಳಲಾಗುವುದು ಮತ್ತು ಹೆಚ್ಚಿನ ಬಸ್‍ಗಳನ್ನು ಈ ಮಾರ್ಗದಲ್ಲಿ ಬಿಡುವಂತೆ ಪತ್ರ ಬರೆಯಲಾಗುವುದು ಎಂದು ಭರವಸೆ ನೀಡಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು. ಪಿಎಸ್‍ಐ ರಾಜಶೇಖರ ರಾಠೋಡ ಸೂಕ್ತ ಪೆÇಲೀಸ್ ಬಂದೋಬಸ್ತ್ ಒದಗಿಸಿದ್ದರು