ಫಲಾನುಭವಿ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರಾಗಿ ನೇಮಕ
ಅಫಜಲಪುರ:ಜು.19: ಭಾರತೀಯ ಜನತಾ ಪಕ್ಷದ ಫಲಾನುಭವಿ ಪ್ರಕೋಷ್ಠದ ರಾಜ್ಯ ಸಮಿತಿಯ ಸದಸ್ಯರನ್ನಾಗಿ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ನಿಂಗದಳ್ಳಿ ಅವರಿಗೆ ನಿಯುಕ್ತಿ ಮಾಡಿ ಫಲಾನುಭವಿ ಪ್ರಕೋಷ್ಠದ ರಾಜ್ಯ ಸಂಚಾಲಕ ಪ್ರಸನ್ನ ನಾಯ್ಡು ಆದೇಶ ಹೊರಡಿಸಿದ್ದಾರೆ.
ಈ ಹೊಣೆಗಾರಿಕೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಪಕ್ಷ ಸಂಘಟನೆಯನ್ನು ತಳಮಟ್ಟದಿಂದ ಸದೃಢಗೊಳಿಸಿ ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಿ ಶಕ್ತಿ ತುಂಬುತ್ತಾ ಪಕ್ಷದ ಗರಿಮೆಯನ್ನು ಹೆಚ್ಚಿಸುವಲ್ಲಿ ಶ್ರಮಿಸಬೇಕೆಂದು ಆದೇಶದ ಮೂಲಕ ತಿಳಿಸಲಾಗಿದೆ.