ಉತ್ತಮ ಶಿಕ್ಷಕರ ಪ್ರಶಸ್ತಿಗೆ ಎಸ್.ಎನ್.ಉಷಾ ಆಯ್ಕೆ
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜು.18: ಕರ್ನಾಟಕ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘ ನೀಡುವ 2023-2024 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ತಾಲೂಕಿನ ಬೂಕನಕೆರೆ ಹೋಬಳಿಯ ದೊದ್ದನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಎಸ್.ಎನ್ ಉಷಾ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿರುವ ಎಸ್.ಎನ್.ಉಷಾ ರಿಯಲ್ ಎಸ್ಟೇಟ್ ಉದ್ಯಮಿ ಪಿಕೆಜಿ ಮಹೇಶ್ ರವರ ಧರ್ಮಪತ್ನಿಯಾಗಿದ್ದು ಉಷಾ ರವರಿಗೆ ದಿನಾಂಕ 23-07-2024 ರ ಮಂಗಳವಾರ ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಕೊಂಡಜ್ಜಿ ಬಸಪ್ಪ ಭವನ, ಭಾರತ್ ಸ್ಕೌಟ್ ಅಂಡ್ ಗೈಡ್ಸ್ ಕಛೇರಿ ಆವರಣದಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಅಭಿನಂಧಿಸಿ ಪ್ರಸಸ್ತಿ ನೀಡಲಾಗುವುದೆಂದು ಕರ್ನಾಟಕ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಕೇಂದ್ರ ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.
ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿ ತಾಲೂಕಿಗೆ ಕೀರ್ತಿ ತಂದಿರುವ ಶಿಕ್ಷಕಿ ಎಸ್.ಎನ್.ಉಷಾ ಅವರನ್ನು ಶಾಸಕ ಹೆಚ್.ಟಿ.ಮಂಜು, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಸಮಾಜ ಸೇವಕರಾದ ವಿಜಯ್ ರಾಮೇಗೌಡ, ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್, ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಎಸ್.ಸೀತಾರಂ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಶಿವರಾಮೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜೇನಹಳ್ಳಿ ಪದ್ಮೇಶ್, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಅಂಚಿ.ಸಣ್ಣ ಸ್ವಾಮೀಗೌಡ, ತಾಲೂಕು ಕಸಾಪ ಅಧ್ಯಕ್ಷ ಹೆಚ್.ಆರ್.ಪೂರ್ಣಚಂದ್ರ ತೇಜಸ್ವಿ ಅಭಿನಂಧಿಸಿದ್ದಾರೆ.