ಚಿತ್ರದುರ್ಗದಲ್ಲಿ ಜು.20ರಂದು ಪ್ರತಿಭಾ ಪುರಸ್ಕಾರ
ಸಂಜೆವಾಣಿ ವಾರ್ತೆ
ದಾವಣಗೆರೆ.ಜು.೧೮;ಚಿತ್ರದುರ್ಗ ನಗರದಲ್ಲಿ ಜು.20ರಂದು ಮಧ್ಯಾಹ್ನ 1.30ಕ್ಕೆ ಎಚ್.ಆಂಜನೇಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾದಿಗೆ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟಿ ಹಾಗೂ ಶಾಸಕ ಕೆ.ಎಸ್.ಬಸವಂತಪ್ಪ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಾಗು ಟ್ರಸ್ಟ್ ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ, ಶಾಸಕರಾದ ಕೆ.ಸಿ‌. ವೀರೇಂದ್ರ ಪಪ್ಪಿ, ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಎಂಎಲ್ಸಿ ಡಿ.ಟಿ.ಶ್ರೀನಿವಾಸ್, ಆದಿ ಜಾಂಭವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ್ ಸೇರಿದಂತೆ ಅನೇಕ ಗಣ್ಯರು ಆಗಮಿಸಲಿದ್ದಾರೆ ಎಂದು ಮಾಹಿತಿ ನೀಡಿದರು.ಶೋಷಣೆ, ದೌರ್ಜನ್ಯ, ಮೌಡ್ಯ ನಿರ್ಮೂಲನೆಗೆ ಶಿಕ್ಷಣವೇ ಪ್ರಮುಖ ಅಸ್ತ್ರ ಎಂಬ ಈ ಮಾತನ್ನು ಅನೇಕ ಸಂತರು. ದಾರ್ಶನಿಕರು. ಚಿಂತಕರು ಸದಾ ಹೇಳಿಕೊಂಡು ಬಂದಿದ್ದಾರೆ. ಅದರಲ್ಲೂ ಸ್ವತಃ ನೋವುಂಡವರ ಅನುಭವದ ಮಾತು ಇದೇ ಆಗಿದೆ. ಆದ್ದರಿಂದ ನಾವೆಲ್ಲರೂ ಶಿಕ್ಷಣಕ್ಕೆ ಹೆಚ್ಚು ಪ್ರೋತ್ಸಾಹ ನೀಡಬೇಕಾಗಿದೆ ಎಂದು ಹೇಳಿದರು.ಡಾ.ಬಿ.ಆರ್. ಅಂಬೇಡ್ಕರ್ ಸೇರಿ ನೂರಾರು ದಾರ್ಶನಿಕರ ಏಕೈಕ ಸಂದೇಶ ಶಿಕ್ಷಣ, ಜ್ಞಾನದಿಂದ ಮಾತ್ರ ಶೋಷಣೆ ಮುಕ್ತ ಸಮಾಹಿ, ಸಮಗ್ರ ಪ್ರಗತಿ ಸಾಧ್ಯ ಎಂಬುದಾಗಿದೆ. ಆದ್ದರಿಂದ ನಾವೆಲ್ಲರೂ ಈ ನಿಟ್ಟಿನಲ್ಲಿ ಹೆಜ್ಜೆ ಹಾಕಬೇಕಿದೆ ಎಂದು ತಿಳಿಸಿದರು.