21ರಂದು  ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುಪೂರ್ಣಿಮೆ ವಿಶೇಷ ಪೂಜೆ
ಸಂಜೆವಾಣಿ ವಾರ್ತೆ
ಹಿರಿಯೂರು. ಜು. 18 –  ನಗರದ ಚಿಕ್ಕಪೇಟೆ ಬಳಿ ಇರುವ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಇದೇ 21ರಂದು ಗುರುಪೂರ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯದ ಅರ್ಚಕರಾದ ಮಂಜುನಾಥ್ ಆಚಾರ್ಯ ಹಾಗೂ ಬೃಂದಾವನ ಮಿತ್ರಕೂಟದ ಸದಸ್ಯರು  ಪತ್ರಿಕೆಗೆ ತಿಳಿಸಿದ್ದಾರೆ. ಇದರ ಅಂಗವಾಗಿ ಮುಂಜಾನೆಯೇ ಪಂಚಾಮೃತ ಅಭಿಷೇಕ, ಪುಷ್ಪಾರ್ಚನೆ, ಲೋಕಕಲ್ಯಾಣಾರ್ಥವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಂಜೆ ಭಜನೆ, ದೀಪೋತ್ಸವ ಹಾಗೂ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ಉಪಯೋಗ ಇರುತ್ತದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ  ಮನವಿ ಮಾಡಿರುತ್ತಾರೆ.