ಸಾಯಿಬಾಬಾ ಮಂದಿರದಲ್ಲಿ ಗುರು ಪೂರ್ಣಿಮೆ ವಿಶೇಷ ಪೂಜೆ
ಸಂಜೆವಾಣಿ ವಾರ್ತೆ
ಹಿರಿಯೂರು ಜು : 18-  ನಗರದ ನೃಪತುಂಗ ಬಡಾವಣೆಯಲ್ಲಿರುವ ಶ್ರೀ ಶಿರಡಿ ಸಾಯಿಬಾಬಾ ದೇವಸ್ಥಾನದಲ್ಲಿ ಇದೇ 21ರ ಭಾನುವಾರ ಗುರುಪೂರ್ಣಿಮೆ ಅಂಗವಾಗಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನದ ಅರ್ಚಕರಾದ ಕರುಣಾ ನಿಧಿ ಯವರು ಪತ್ರಿಕೆಗೆ ತಿಳಿಸಿದ್ದಾರೆ. ಇದರ ಅಂಗವಾಗಿ 20ರ ಶನಿವಾರ ಬೆಳಿಗ್ಗೆ 5  ಗಂಟೆಗೆ ಮಹಾ ಗಣಪತಿ ಹೋಮ ಹೋಮದ ನಂತರ ಮಹಾಮಂಗಳಾರತಿ ತೀರ್ಥ ಪ್ರಸಾದ ವಿನಿಯೋಗ ನಡೆಯುತ್ತದೆ. 11 ಗಂಟೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಬೆಳ್ಳಿರಥದಲ್ಲಿ ಸ್ವಾಮಿಯ ಭವ್ಯವಾದ ಮೆರವಣಿಗೆ ನಡೆಯಲಿದೆ,  ಭಾಗವಹಿಸುವ ಸುಮಂಗಲೆಯರಿಗೆ ಮಡ್ಲಕ್ಕಿ ವಿತರಣೆ ಇರುತ್ತದೆ.  21 ರ ಭಾನುವಾರ ಬೆಳಿಗ್ಗೆ 5  ಗಂಟೆಗೆ ಕಾಕಡಾರತಿಯಿಂದ ಪೂಜಾ ಕಾರ್ಯಕ್ರಮಗಳು ಆರಂಭವಾಗಲಿದ್ದು ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಮಹಾ  ರುದ್ರಾಭಿಷೇಕ, ನವಗ್ರಹ ಪೂಜೆ, ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆ ಏರ್ಪಡಿಸಲಾಗಿದೆ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಹಾಗೂ ಅನ್ನದಾಸೋಹ ನಡೆಯಲಿದೆ. ಭಕ್ತಾದಿಗಳು ಈ ಎಲ್ಲ ಪೂಜಾ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರುಣಾನಿಧಿ ಮನವಿ ಮಾಡಿದ್ದಾರೆ.