ಸೆ. 30ರ ವರೆಗೆ ಜನಸುರಕ್ಷಾ ಕ್ಯಾಂಪ್ ಆಯೋಜನೆ:ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಗೆ ಅಧಿಕಾರಿಗಳು ಶ್ರಮಿಸುವಂತೆಜಿಲ್ಲಾ ಪಂಚಾಯತ್ ಸಿ.ಇ.ಓ ಕರೆ
ಕಲಬುರಗಿ:ಜು.18: ಪ್ರಧಾನಮಂತ್ರಿ ಜೀವನ ಜ್ಯೋತಿ ಬೀಮಾ ಯೋಜನಾ (PMJJBY) ಮತ್ತು ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನಾ (PMSBY) ಸೇರಿದಂತೆ ಇತರೆ ರೈತ ಕಲ್ಯಾಣ ಯೋಜನೆಯಡಿ ನೋಂದಣಿ ಮಾಡಿಕೊಳ್ಳಲು ಜಿಲ್ಲೆಯ ಗ್ರಾಮ ಪಂಚಾಯತ್ ಮಟ್ಟದಲ್ಲಿ ಜನಸುರಕ್ಷಾ ಕ್ಯಾಂಪ್ ಆಯೋಜಿಸಲಾಗುತ್ತಿದ್ದು, ಅಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿ ಮಾಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಕರೆ ನೀಡಿದರು.
ಕಳೆದ ಜೂನ್ 18 ರಿಂದ ಗ್ರಾಮ ಪಂಚಾಯತಿ ಮಟ್ಟದಲ್ಲಿ ಕ್ಯಾಂಪ್ ಅಯೋಜಿಸಲಾಗುತ್ತಿದ್ದು, ಸೆ.30ರ ವರೆಗೆ ನಡೆಯಲಿದೆ ಎಂದು ಡಿ.ಎಲ್.ಬಿ.ಸಿ. ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ಹಾಗೂ ಜಿಲ್ಲಾ ಮಾರ್ಗದರ್ಶಿ ಬ್ಯಾಂಕಿನ ಜಿಲ್ಲಾ ವ್ಯವಸ್ಥಾಪಕರು ಜಂಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗ್ರಾಮ ಪಂಚಾಯತ್ ಪಿ.ಡಿ.ಓ, ಗ್ರಾಮ ಪಂಚಾಯತ್ ಸಿಬ್ಬಂದಿ, ಸ್ವ-ಸಹಾಯ ಸಂಘದ ಮಹಿಳೆಯರು ಹಾಗೂ ವಿವಿಧ ಬ್ಯಾಂಕುಗಳ ಅಧಿಕಾರಿಗಳು ಪರಸ್ಪರ ಸಮನ್ವಯ ಸಾಧಿಸಿ ಈ ಯೋಜನೆಗಳಡಿ ಸಾರ್ವಜನಿಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸುವ ಮೂಲಕ ಯೋಜನೆ ಅನುμÁ್ಠನಕ್ಕೆ ಅಗತ್ಯ ಕ್ರಮ ವಹಿಸುವಂತೆ ಸೂಚಿಸಿದ್ದಾರೆ.