ಈಜಲು ಹೋದ ವಿದ್ಯಾರ್ಥಿ ನೀರಲ್ಲಿ ನಾಪತ್ತೆ
ಬಸವಕಲ್ಯಾಣ:ಜು,18:ಜಲಾಶಯದ ನೀರಿನಲ್ಲಿ ಈಜಲು ಹೋದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರಲ್ಲಿ ಮುಳು ನಾಪತ್ತೆಯಾದ ಘಟನೆ ತಾಲೂಕಿನ ಖೇರ್ಡಾ(ಬಿ) ಗ್ರಾಮದಲ್ಲಿ ಜರುಗಿದೆ.
ಕಲಬುರ್ಗಿ ಜಿಲ್ಲೆಯ ಅಫಜಲಪುರ್ ತಾಲೂಕಿನ ಗೌರ್ ಗ್ರಾಮದ ನಿವಾಸಿ
ಪ್ರತೀಕ ನೀಲಕಂಠ ಗೌರ್ (23) ನೀರಿನಲ್ಲಿ ನಾಪತ್ತೆಯಾದ ವಿದ್ಯಾರ್ಥಿಯಾಗಿದ್ದಾನೆ.
ತನ್ನ ಗೆಳೆಯರೊಂದಿಗೆ ಮುಲ್ಲಾಮಾರಿ ಜಲಾಶಯಕ್ಕೆ ಈಜಾಡಲು ತೆರಳಿದ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ಸುದ್ದಿ ತಿಳಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿನೀಡಿ ಶವ ಶೋಧ ಕಾರ್ಯ ಮುಂದುವರೆಸಿದೆ. ಹುಮನಾಬಾದನ ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್ ಸೇರಿದಂತೆ ಮುಡಬಿ ಠಾಣೆ ಪೆÇಲೀಸರ ತಂಡ ಸ್ಥಳಕ್ಕೆ ಭೇಟಿನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರೆಸಿದೆ