ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಿ
ಬೀದರ್:ಜು.18: ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್) ಸ್ಥಾಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಕಲ್ಯಾಣ ಕರ್ನಾಟಕದ ರಾಯಚೂರಿನಲ್ಲಿ ಸಂಸ್ಥೆ ಸ್ಥಾಪಿಸಲು 2022ರ ಮೇ 13ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಾ ಬರಲಾಗಿದೆ. ರಾಜ್ಯ ಸರ್ಕಾರ ಸಹ ಈ ಕುರಿತು ಶಿಫಾರಸು ಮಾಡಿದೆ. ಆದರೂ, ಕೇಂದ್ರ ಸರ್ಕಾರ ಸ್ಪಂದಿಸದಿರುವುದು ಖಂಡನೀಯ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದುಳಿದ ಕಾರಣಕ್ಕಾಗಿ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸದಿದ್ದರೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದ್ದಾರೆ.