ಪ್ಲಾಸ್ಟಿಕ್ ಸರ್ಜರಿ ಸದುಪಯೋಗ ಪಡೆದುಕೊಳ್ಳಿ
ವಿಜಯಪುರ, ಜು. 18: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗ ಮತ್ತು ಭಾರತೀಯ ಶಸ್ತ ಚಿಕಿತ್ಸಕರ ಸಂಘದ ವಿಜಯಪುರ ಜಿಲ್ಲಾ ಶಾಖೆಯ ಸಹಯೋಗದಲ್ಲಿ ನಗರದಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆಯ ಕಾರ್ಯಕ್ರಮ ನಡೆಯಿತು.
ಸೋಮವಾರ ಈ ಕಾರ್ಯಕ್ರಮದ ಅಂಗವಾಗಿ ನಡೆದ ಮುಂದುವರೆದ ವೈದ್ಯಕೀಯ ಶಿಕ್ಷಣ ಸಮ್ಮೇಳನವನ್ನು ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ ಉದ್ಘಾಟಿಸಿದರು.
ಈ ಸಮಾರಂಭದಲ್ಲಿ ಖ್ಯಾತ ಪ್ಲಾಸ್ಟಿಕ್ ಸರ್ಜನ್ ಡಾ. ಪ್ರದೀಪ ಜೈನ್ ಗಾಯ ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು. ಡಾ. ವಿಜಯಕುಮಾರ ಹುಡೇದ ಪ್ಲಾಸ್ಟಿಕ್ ಸರ್ಜರಿಯ ಸತ್ಯ ಮತ್ತು ಮಿತ್ಯಗಳ ಕುರಿತು ಮಾತನಾಡಿದರು. ಪ್ಲಾಸ್ಟಿಕ್ ಸರ್ಜರಿಯು ತುಂಬಾ ವಿಶಾಲವಾದುದು ಮತ್ತು ಇದರ ಉಪಯೋಗ ಜನರು ಪಡೆದುಕೊಳ್ಳಬೇಕು ಎಂದು ಹೇಳಿದರು.
ನರಶಸ್ತ್ರಚಿಕಿತ್ಸಕ ಡಾ. ಬಸವರಾಜ ಬಡದಾಳ ಅವರು ಪ್ಲಾಸ್ಟಿಕ್ ಸರ್ಜರಿ ಮತ್ತು ನ್ಯೂರೋ ಸರ್ಜರಿಯ ಕುರಿತು ಉಪನ್ಯಾಸ ನೀಡಿದರು. ಡಾ. ಅನಿಕೇತನ್ ಅವರು ಪ್ಲಾಸ್ಟಿಕ್ ಸರ್ಜರಿ ಮತ್ತು ಮುಖದ ಪ್ಲಾಪ ಸರ್ಜರಿಯ ಕುರಿತು ಮಾತನಾಡಿದರು. ಡಾ. ಶ್ರೀಪಾದ ಕುಲಕರ್ಣಿ ಅವರು ಆರ್ಥೋಪ್ಲಾಸಿಟ್ಕ್ ಕೇರ್ ಕುರಿತು ಉಪನ್ಯಾಸ ನೀಡಿದರು. ಡಾ. ಸನ್ಮಿತ್ರ ಐಹೊಳ್ಳಿ ಸೌಂದರ್ಯ ವರ್ಧಕ ಶಸ್ತ್ರಚಿಕಿತ್ಸೆ ಕುರಿತು ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ವಿಜಯಪುರದ ಖ್ಯಾತ ಶಸ್ತ್ರಚಿಕಿತ್ಸಕ ಡಾ. ರವಿಕುಮಾರ ಚೌಧರಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಸಮಕುಲಾಧಿಪತಿ ಪೆÇ್ರ. ವೈ. ಎಂ. ಜಯರಾಜ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ವಿಜಯಪುರ ಜಿಲ್ಲಾ ಶಸ್ತ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಇದ್ದರು.
ಈ ಸಮ್ಮೇಳನದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಫ್ಯಾಕಲ್ಟಿ ಆಫ್ ಮೆಡಿಸಿನ್ ಡಾ. ತೇಜಸ್ವಿನಿ ವಲ್ಲಭ, ಉಪಪ್ರಾಂಶುಪಾಲ ಡಾ. ಎಂ. ಬಿ. ಪಾಟೀಲ, ಜಿಲ್ಲಾ ಆಸ್ಪತ್ರೆಯ ಡಾ. ಆನಂದ ಝಳಕಿ, ಡಾ. ನಿಶಿಕಾಂತ ಗುಜರ, ಡಾ. ಸಂತೋಷ ನಂದಿ, ಸಹ ಪ್ರಾಧ್ಯಾಪಕ ಡಾ. ಗಿರೀಶ ಕುಲ್ಲೊಳ್ಳಿ, ಡಾ. ವಿಕ್ರಂ ಸಿಂದಗಿಕರ, ಡಾ. ದೀಪಕ ಚವ್ಹಾಣ, ಡಾ. ದಯಾನಂದ ಬಿರಾದಾರ, ಡಾ. ಸಂಜೀವ ರಾಠೋಡ, ಡಾ. ಮಂಜುನಾಥ ಸಾವಂತ ಮತ್ತು ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ, ಅಲ್ ಅಮೀನ್ ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆಯ ಶಸ್ತ ಚಿಕಿತ್ಸೆ ವಿಭಾಗದ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು