ಖಾಸಗಿ ಆಸ್ಪತ್ರೆ ಕ್ಲಿನಿಕ್‌ಗಳ ನೊಂದಣಿ ನವೀಕರಣ ಕಡ್ಡಾಯ
ಕೋಲಾರ,ಜು,೧೮- ಕೆ.ಪಿ.ಎಂ.ಇ ಕಾಯ್ದೆಯಡಿ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳು ನಿಗದಿತ ಸಮಯದಲ್ಲಿ ನವೀಕರಣ ಹಾಗೂ ನೋಂದಣಿ ಮಾಡಿಸುವುದು ಕಡ್ಡಾಯವಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕೆ.ಪಿ.ಎಂ.ಇ ಜಿಲ್ಲಾ ಮಟ್ಟದ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಒಟ್ಟು ೪೫೨ ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳಿದ್ದು, ನಿಗದಿತ ಸಮಯದಲ್ಲಿ ತಮ್ಮ ಲೈಸನ್ಸ್‌ನಲ್ಲಿ ನವೀಕರಣ ಮಾಡಿಸಿಕೊಳ್ಳಬೇಕು ಇಲ್ಲವಾದರೆ ಅವರ ಲೈಸೆನ್ಸ್ ಅಮಾನ್ಯ ಮಾಡಲಾಗುವುದು ಎಂದರು.
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ನೋಂದಣಿಗಾಗಿ ೫೫ ಅರ್ಜಿಗಳು ಹಾಗೂ ನವೀಕರಣಕ್ಕಾಗಿ ೧೦ ಅರ್ಜಿಗಳು ಬಂದಿದ್ದು, ಅವುಗಳಲ್ಲಿ ದಾಖಲೆ ಸರಿಯಿಲ್ಲದ ಕೆಲವೊಂದು ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಿದರು.
ವೈದ್ಯಾಧಿಕಾರಿ ಡಾ.ಚಂದನ್ ಅವರು ಮಾತನಾಡಿ ಪ್ರತಿಯೊಂದು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ದರ ಪಟ್ಟಿಯನ್ನು ಪ್ರದರ್ಶಿಸುವುದು ಕಡ್ಡಾಯವಾಗಿದೆ. ನಸಿಂಗ್ ಹೋಂ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ ಅಗ್ನಿಶಾಮಕ ಇಲಾಖೆಯಿಂದ ಫೈಯರ್ ಆಡಿಟ್ ಮಾಡಿಸಬೇಕು ಖಾಸಗಿ ಆರೋಗ್ಯ ಸಮಸ್ಯೆಗಳು ನಿಗದಿತ ನಮೋನೆಯಲ್ಲಿ ಮತ್ತು ಬನದಲ್ಲಿ ನಾಮಫಲಕಗಳನ್ನು ಪ್ರದರ್ಶಿಸಬೇಕು ಹಾಗೂ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ನಿಯಮಾನುಸಾರ ಆಯುಷ್ಕಾರ ಆರೋಗ್ಯ ಕಲ್ಯಾಣ ಕುಟುಂಬ ಯೋಜನೆಯಲ್ಲಿ ಯೋಜನೆ ಅಡಿಯಲ್ಲಿ ಆಸ್ಪತ್ರೆ ಮತ್ತು ನಸಿಂಗ್ ಹೋಮ್ ಗಳು ನೊಂದಣಿ ಮಾಡಿಸಬೇಕು
ಜಿಲ್ಲೆಯಲ್ಲಿ ನೋಂದಣಿಯಾಗದ ೧೨೮ ಕ್ಲಿನಿಕ್‌ಗಳಿದ್ದು ತಾಲ್ಲೂಕು ಸಮಿತಿಯಿಂದ ಎಲ್ಲಾ ತಾಲ್ಲೂಕುಗಳ ೨೫ ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ. ಈವರಗೆ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ೧೪ ಪ್ರಕರಣಗಳಿದ್ದು, ಇವುಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪದ್ಮ ಬಸವಂತಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಗದೀಶ್ ಸೇರಿದಂತೆ ಆರೋಗ್ಯ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.