ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ
ಸಂಜೆವಾಣಿ ವಾರ್ತೆ
ಚಿತ್ರದುರ್ಗ.ಜು.೧೭; ಜಿಲ್ಲಾಧಿಕಾರಿ ಟಿ.ವೆಂಕಟೇಶ್  ಚಳ್ಳಕೆರೆ ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ತಾಲ್ಲೂಕು ಮಟ್ಟದ ಕಂದಾಯ ಇಲಾಖೆ ಅಧಿಕಾರಿಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ರಾಜಸ್ವ ನಿರೀಕ್ಷಕರು ವಿನಾ ಕಾರಣ ಸಾರ್ವಜನಿಕರ ಅರ್ಜಿಗಳ ವಿಲೇವಾರಿಯನ್ನು ವಿಳಂಬ ಮಾಡಬಾರದು. ಸಕಾಲದ ಕಾಲಮಿತಿಯಲ್ಲಿಯೇ ಸಾರ್ವಜನಿಕರಿಗೆ ಸೇವೆ ನೀಡಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ರಹೆಮಾನ್ ಪಾಷಾ ಉಪಸ್ಥಿತರಿದ್ದರು.