ಮಾತೃವಂದನ ಪೌಷ್ಟಿಕ ಆಹಾರ ಕಾರ್ಯಕ್ರಮ
ಸೇಡಂ, ಜು,17:ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಮಾತೃವಂದನ ಪೌಷ್ಟಿಕ ಆಹಾರ ಕಾರ್ಯಕ್ರಮ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಎಸ್ ಹೊಸಮನಿ ಮುಖ್ಯ ಅತಿಥಿಗಳಾಗಿ ತಾಲೂಕ ಆರೋಗ್ಯ ಅಧಿಕಾರಿಗಳಾದ ಡಾ. ಸಂಜೀವಕುಮಾರ ಪಾಟೀಲ್ ಮತ್ತು ತಾಲೂಕ ಹಿರಿಯ ಆರೋಗ್ಯ ನಿರೀಕ್ಷಣ ಅಧಿಕಾರಿಗಳಾದ ಶಿವಯೋಗಿ ಸಕ್ಷಾಲ್ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಷಕುಮಾರಿ ಪ್ರೀತಿ, ಅಂಗನವಾಡಿ ಮೇಲ್ವಿಚಾರಕರಾದ ಶ್ರೀಮತಿ ಇಂದುಮತಿ ಮತ್ತು ಗ್ರಾಮೀಣ ಅಂಗನವಾಡಿ ಮೇಲ್ವಿಚಾರಕರು ಉಪಸ್ಥಿತರಿದ್ದರು.