ಕಾನೂನು ಅರಿವು ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮ
ಹುಬ್ಬಳ್ಳಿ,ಜು.17: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ ಸ್ವಾಮಿ ವಿವೇಕಾನಂದ ಯೂಥ್ ಮೊಮೆಂಟ್ ಹಾಗೂ ಗ್ರಾಮ ಪಂಚಾಯಿತಿ ಸುಳ್ಳ ಗ್ರಾಮ ಹುಬ್ಬಳ್ಳಿ ತಾಲೂಕು ಇವರ ಸಯುಕ್ತಾಕ್ಷರದಲ್ಲಿ ಸುಳ್ಳ ಗ್ರಾಮದಲ್ಲಿ ಕಾನೂನು ಅರಿವು ನೆರವು ಕಾರ್ಯಕ್ರಮ ಮತ್ತು ಆರೋಗ್ಯ ಜಾಗೃತಿ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು
ಕಾರ್ಯಕ್ರಮವನ್ನು ಪರಶುರಾಮ್ ಎಫ್ ದೊಡ್ಮನಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಧಾರವಾಡ ಉದ್ಘಾಟಿಸಿದರು.