ಜಿ.ಪಂ ಸಿಇಓ ಭೇಟಿ ಪರಿಶೀಲನೆ
ಬಾಗಲಕೋಟೆ,ಜು17 : ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಗುಳೇದಗುಡ್ಡ ಮತ್ತು ಬಾದಾಮಿ ತಾಲೂಕಿನ ವಿವಿಧ ಗ್ರಾಮ ಪಂಚಾಯತ, ವಿವಿಧ ಕಾಮಗಾರಿ, ಶಾಲೆ ಹಾಗೂ ತಾಲೂಕಾ ಆಸ್ಪತ್ರೆಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭೇಟಿ ಸಮಯದಲ್ಲಿ ಗುಳೇದಗುಡ್ಡ ಮತ್ತು ಬಾದಾಮಿ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ ಸೇರಿದಂತೆ ತಾ.ಪಂ ಸಹಾಯಕ ನಿರ್ದೇಶಕರಾದ ಸತೀಶ ಮಾಗೋಂಡ, ರಾಮಚಂದ್ರ ಮೈತ್ರಿ ಸೇರಿದಂತೆ ತಾಲೂಕ ಆರೋಗ್ಯಾಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ಐ.ಇ.ಸಿ. ಸಂಯೋಜಕರು , ತಾಂತ್ರಿಕ ಸಹಾಯಕ ಅಭಿಯಂತರರು ಇದ್ದರು.