ಡೆಂಗ್ಯೂ ನಿಯಂತ್ರಣ ನಮ್ಮ ಕೈಯಲ್ಲಿದೆ: ಡಾ.ಅಜಿತ್
ಸಂಜೆವಾಣಿ ವಾರ್ತೆ
ಕೆ.ಆರ್.ಪೇಟೆ.ಜು.17: ಡೆಂಗ್ಯೂ ಮತ್ತು ಚಿಕುನ್ ಗುನ್ಯ ಜ್ವರ ನಿಯಂತ್ರಣ ನಮ್ಮೆಲ್ಲರ ಕೈಯಲ್ಲಿದೆ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವುದರಿಂದ ಸೊಳ್ಳೆ ಕಡಿತದಿಂದ ಬರುವ ರೋಗಗಳಿಂದ ಪಾರಾಗಬಹುದೆಂದು ತಾಲ್ಲೋಕು ಆರೋಗ್ಯ ಅಧಿಕಾರಿ ಡಾ:ಅಜೀತ್ ಅಭಿಪ್ರಾಯಪಟ್ಟರು. ತಾಲ್ಲೋಕು ದುಂಡಶೆಟ್ಟಿ ಲಕ್ಷ್ಮಮ್ಮ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಮಾದ್ಯಮ ವರದಿಗಾರರಿಗೆ ಆರೋಗ್ಯ ಶಿಕ್ಷಣದಲ್ಲಿ ಡೆಂಗ್ಯೂ ನಿಯಂತ್ರಣದ ಬಗ್ಗೆ ಮಾತನಾಡಿದ ಅವರು
ಡೆಂಗ್ಯೂ ಹಾಗೂ ಚಿಕುನ್ ಗುನ್ಯ ಜ್ವರಗಳು ಸೋಂಕು ಹೊಂದಿದ ಈಡಿಸ್ ಎಂಬ ಸೊಳ್ಳೆಯ ಕಡಿತದಿಂದ ಬರುತ್ತವೆ ನಿಂತ ಸ್ವಚ್ಚ ನೀರಿನಲ್ಲಿ ಹುಟ್ಟುವ ಈ ಸೊಳ್ಳೆ ಸಾಧಾರಣವಾಗಿ ಹಗಲಿನಲ್ಲಿ ಕಚ್ಚುತ್ತವೆ ಕಡಿತ ಚಿಕ್ಕದಾದರೂ ಭೀತಿ ದೊಡ್ಡದು ನಿರ್ದಿಷ್ಟ ಚಿಕಿತ್ಸೆ ಇಲ್ಲದ ಈ ಖಾಯಿಲೆಗೆ ಮುಂಜಾಗ್ರತೆಯೆ ಮದ್ದು ಎಂದ ಅವರು ಸೊಳ್ಳೆಯ ಜೀವನ ಚಕ್ರ ಕುರಿತು ಮಾಹಿತಿ ನೀಡಿ ಸೊಳ್ಳೆಗಳ ಉತ್ಪತ್ತಿ ತಡೆಗಟ್ಟುವಿಕೆ ರೋಗ ನಿಯಂತ್ರಣ ಮಾಡಬೇಕು ಇದ್ದಕ್ಕಿದ್ದಂತೆ ಜ್ವರ,ಕಣ್ಣಿನ ಹಿಂಭಾಗ ನೋವು,ಸ್ನಾಯು ಮತ್ತು ಕೀಲುಗಳಲ್ಲಿ ನೋವು,ಹೊಟ್ಟೆ ನೋವು ಮುಂತಾದವು ರೋಗದ ಲಕ್ಷಣಗಳಾಗಿದ್ದು ಇಂತಹ,ಲಕ್ಷಣಗಳು ಕಂಡು ಬಂದಾಗ ತಕ್ಷಣ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಸಮುದಾಯದೊಂದಿಗೆ ಸೇರಿ ಡೆಂಗ್ಯೂ ನಿಯಂತ್ರಣ ಮಾಡೋಣ ಡೆಂಗ್ಯೂ ನಿಯಂತ್ರಣಕ್ಕೆ ಸರ್ವರ ಸಹಕಾರವೂ ಅತಿಮುಖ್ಯವಾಗಿದೆ ಎಂದು ಸಲಹೆ ನೀಡಿದರು ತಾಲ್ಲೋಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಶಶಿಧರ್ ಮಾತನಾಡಿ ಸೊಳ್ಳೆ ಕಡಿತದಿಂದ ಪಾರಾಗಲು ಮೈತುಂಬ ಬಟ್ಟೆ ಧರಿಸುವುದು ಸೊಳ್ಳೆ ಪರದೆ ಉಪಯೋಗಿಸುವುದು ನೀರಿನ ಶೇಖರಣೆಗಳನ್ನು ಮುಚ್ಚಿಡುವುದು,ಮನೆಯ ಸುತ್ತ ಮುತ್ತ ನೀರು ನಿಲ್ಲದಂತೆ ಎಚ್ಚರ ವಹಿಸುವುದು ಮತ್ತು ಪರಿಸರವನ್ನು ಶುಚಿಯಾಗಿಟ್ಟು ಕೊಳ್ಳವುದು ಪ್ರತಿ ಶುಕ್ರವಾರ ಪ್ರತಿಯೊಬ್ಬರು ತಮ್ಮ ತಮ್ಮ ಮನೆಯಲ್ಲಿ ಒಣ ದಿನ ಆಚರಿಸುವ ಮೂಲಕ ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸಬೇಕು ಒಟ್ಟಾರೆ ಎಲ್ಲರೂ ಸೊಳ್ಳೆ ಕಡಿತದಿಂದ ಜಾಗೃತರಾಗಬೇಕೆಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾ ಅಧಿಕಾರಿ ಸತೀಶ್ ಮತ್ತು ಆರೋಗ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು