ಬೆಳೆ ವಿಮೆ ನೋಂದಣಿಗೆ ಜು. 31 ಕೊನೆಯ ದಿನ
ಕಲಬುರಗಿ:ಜು.16:ಕಲಬುರಗಿ ಜಿಲ್ಲೆಯಲ್ಲಿ ಮುಂಗಾರು ಬಿತ್ತನೆ ಭರದಿಂದ ಸಾಗಿದ್ದು, ಬಿತ್ತನೆಕಾರ್ಯ ಕೈಗೊಳ್ಳುವುದರ ಜೊತೆಗೆ ಬಿತ್ತಿದ ಬೆಳೆಯ ಕ್ಷೇತ್ರವನ್ನು ಪ್ರಧಾನಮಂತ್ರಿ ಫಸಲ್ ಭೀಮಾ (ಬೆಳೆ ವಿಮೆ) ವ್ಯಾಪ್ತಿಗೆ ನೋಂದಾಯಿಸಿಕೊಳ್ಳಬೇಕು. ಜಿಲ್ಲೆಯ ಎಲ್ಲಾ ರೈತರು ಬೆಳೆ ವಿಮೆಗೆ ನೋಂದಣಿ ಮಾಡಿಕೊಳ್ಳಲು 2024ರ ಜುಲೈ 31 ರಂದು ಕೊನೆಯ ದಿನವಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ತಿಳಿಸಿದ್ದಾರೆ.