ಮೊಟ್ಟೆ ವಿತರಣೆ ಕಾರ್ಯಕ್ರಮ ಉದ್ಘಾಟನೆ
ನವಲಗುಂದ,ಸೆ.28: ಪಿ.ಎಂ. ಪೆÇೀಷಣ್ ಯೋಜನೆ ಅಡಿಯಲ್ಲಿ ವಾರದಲ್ಲಿ ಆರು ದಿನ ಮೊಟ್ಟೆ ವಿತರಿಸಲಾಗುತ್ತಿದ್ದು, ಸದುಪಯೋಗಪಡಿಸಿಕೊಂಡು ಮಕ್ಕಳೆಲ್ಲರೂ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಬೇಕು ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಪಟ್ಟಣದ ಬಸವೇಶ್ವರ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.6ರಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಹಾಗೂ ಅಕ್ಷರ ದಾಸೋಹದಿಂದ ಹಮ್ಮಿಕೊಂಡಿದ್ದ ಮೊಟ್ಟೆ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಗಳಲ್ಲಿಯೂ ಭಾಗವಹಿಸಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ತಾವೆಲ್ಲರೂ ಸಾಧನೆ ಮಾಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ತಹಶೀಲ್ದಾರ್ ಸುಧೀರ್ ಸಾಹುಕಾರ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಾನಂದ ಮಲ್ಲಾಡ, ಪುರಸಭೆಯ ಮುಖ್ಯಾಧಿಕಾರಿ ಶರಣು ಪೂಜಾರ, ರೂಪಾ ಪುರಂಕರ, ಕುಲಕರ್ಣಿ, ಪುರಸಭೆಯ ಅಧ್ಯಕ್ಷ ಶಿವಾನಂದ ತಡಸಿ, ಸದಸ್ಯರಾದ, ಮಂಜುನಾಥ ಜಾಧವ, ಮೋದಿನಸಾಬ ಶಿರೂರ ಸೇರಿ ಎಲ್ಲ ಪುರಸಭಾ ಸದಸ್ಯರು, ಬಸವೇಶ್ವರ ನಗರ ಸ್ಥಳೀಯ ಸದಸ್ಯರು, ನೌಕರರ ಸಂಘ, ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಣ ಸಂಯೋಜಕರು ಉಪಸ್ಥಿತರಿದ್ದರು.