ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರ ಬಂಧನ, ಬಿಡುಗಡೆ
ಸಂಜೆವಾಣಿ ನ್ಯೂಸ್
ಮೈಸೂರು:ಸೆ.28:- ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಪಂಚಾಯಿತಿನಲ್ಲಿ ನಡೆಯಲಿರುವ ಕೆ.ಡಿ.ಪಿ. ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರುಗಳನ್ನು ಪೆÇಲೀಸರು ಬಂಧಿಸಿ ಬಿಡುಗಡೆಗೊಳಿಸಿದ ಘಟನೆ ನಡೆಯಿತು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಕೆ.ಡಿ.ಪಿ.ಆಯೋಜನೆ ಮಾಡಲಾಗಿತ್ತು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಕೆ.ಡಿ.ಪಿ. ಸಭೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೆÇಲೀಸರು ಬಂಧಿಸಿ ಸಿಎಆರ್ ಮೈದಾನಕ್ಕೆ ಕರೆದೊಯ್ದರು.
ಇದಕ್ಕೂ ಮೊದಲು ಬಿಜೆಪಿ ಮುಖಂಡರುಗಳು ಕಾರ್ಯಕರ್ತರು ವಿಷ್ಣುವರ್ಧನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪತ್ನಿ ಹೆಸರಿನಲ್ಲಿ 14 ಸೈಟ್ ನುಂಗಿದ್ದಾರೆ. ದಲಿತರ ಜಮೀನನ್ನು ಮೋಸ ಮಾಡಿ ಕಬಳಿಸಿದ್ದಾರಣ್ಣ, ವಾಲ್ಮೀಕಿ ನಿಗಮದಲ್ಲಿ 189 ಕೋಟಿ ನುಂಗಿದರಣ್ಣ ಎಂದು ಹಾಡು ಹೇಳಿ ಪ್ರತಿಭಟಿಸಿದರು.
ನಂತರ ಜಿಲ್ಲಾ ಪಂಚಾಯಿತಿ ಕಚೇರಿಯತ್ತ ತೆರಳು ಮುಂದಾದಾಗ ಪೆÇಲೀಸರು ಬ್ಯಾರಿಕೇಡ್ ಹಾಕಿ ತಡೆದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಪೆÇಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಸ್ಥಿತಿ ಮಿತಿಮೀರುವುದನ್ನು ಅರಿತ ಪೆÇಲೀಸರು ಎಲ್ಲರನ್ನು ಬಂಧಿಸಿದರು. ಕೇಂದ್ರ ಮಾಜಿ ಸಚಿವ ಭಗವಂತ ಖೂಬಾ, ಶಾಸಕ ಟಿ.ಎಸ್.ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಜೋಗಿ ಮಂಜು, ಯುವಮೋರ್ಚ ಅಧ್ಯಕ್ಷ ರಾಕಿ ಸೇರಿ ಹಲವರನ್ನು ಬಂಧಿಸಿದ ಪೆÇಲೀಸರು ಸಿಎಆರ್ ಮೈದಾನಕ್ಕೆ ಕರೆದೊಯ್ದರು. ಬಳಿಕ ಅವರನ್ನು ಬಿಡುಗಡೆ ಮಾಡಲಾಯಿತು.