ತಮಟೆ ವಾದ್ಯ ಬಾರಿಸಿ ಗಮನ ಸೆಳೆದ ಮಾಜಿ ಸಚಿವ ಎಚ್.ಆಂಜನೇಯ, ಶಾಸಕ ಬಸವಂತಪ್ಪ

ಸಂಜೆವಾಣಿ ವಾರ್ತೆ
ದಾವಣಗೆರೆ.ಜು.೧೫: ಮಾಜಿ ಸಚಿವ ಎಚ್ .ಆಂಜನೇಯ ಮತ್ತು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರು ಸಂಪ್ರದಾಯಿಕ ತಮಟೆ ವಾದ್ಯ ಬಾರಿಸಿ  ನೆರೆದಿದ್ದ ಸಾವಿರಾರು ಸಮಾಜ ಬಾಂಧವರ ಗಮನ ಸೆಳೆದರು.ಬೆಂಗಳೂರಿನ ಸುಮನಹಳ್ಳಿ ಬಳಿ ನೂತನವಾಗಿ ನಿರ್ಮಿಸಿರುವ ಏಷ್ಯಾ ಖಂಡದಲ್ಲೇ ಮೊದಲ ಕಟ್ಟಡವಾಗಿರುವ ಹಸಿರು ಕ್ರಾಂತಿ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಪ್ರಧಾನಿ ಇವರ ಸ್ಮರಣೆಗಾಗಿ ಬಾಬು ಜಗಜೀವನ್ ರಾಮ್ ಭವನ ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಮತ್ತು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಅವರು, ತಮಟೆ ವಾದ್ಯ ಬಾರಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ,ಲೋಕಸಭಾ ಮಾಜಿ ಸ್ಪೀಕರ್ ಮೀನಾ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಗಣ್ಯರ ಮೆಚ್ಚುಗೆಗೆ ಪಾತ್ರರಾದರು.