ಚೆನ್ನೈ – ಶಿವಮೊಗ್ಗ ರೈಲು ಸಂಚಾರಕ್ಕೆ ಚಾಲನೆ

ಸಂಜೆವಾಣಿ ವಾರ್ತೆ
ಶಿವಮೊಗ್ಗ, ಜು. 14: ಚೆನ್ನೈ – ಶಿವಮೊಗ್ಗ ನಡುವೆ ಸಂಚರಿಸುವ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಸಂಚಾರಕ್ಕೆ ಶನಿವಾರ ಸಂಜೆ, ಶಿವಮೊಗ್ಗ ನಗರದ ಮುಖ್ಯ ರೈಲ್ವೆ ನಿಲ್ದಾಣದಲ್ಲಿ ವಿಧ್ಯುಕ್ತವಾಗಿ ಚಾಲನೆ ನೀಡಲಾಯಿತು.ಸಂಜೆ 5. 15 ಕ್ಕೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರು ಹಸಿರು ನಿಶಾನೆ ತೋರ್ಪಡಿಸುವ ಮೂಲಕ ರೈಲು ಸಂಚಾರಕ್ಕೆ ಅಧಿಕೃತ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯಾನಾಯ್ಕ್, ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್, ಧನಂಜಯ ಸರ್ಜಿ ಸೇರಿದಂತೆ ರೈಲ್ವೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಮೊದಲಾದವರಿದ್ದರು.ರೈಲ್ವೆ ನಿಲ್ದಾಣದ ಫ್ಲ್ಯಾಟ್’ಫಾರಂ-1 ರಲ್ಲಿ ವೇದಿಕೆ ಸಮಾರಂಭಆಯೋಜಿಸಲಾಗಿತ್ತು.ಸಂಸದರು, ಶಾಸಕರು, ರೈಲ್ವೆ ಅಧಿಕಾರಿಗಳು ಮಾತನಾಡಿದರು. ಇದೇ ವೇಳೆ ವಿವಿಧ ಸಂಘಟನೆಗಳು ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಸನ್ಮಾನಿಸಿದವು. ಕಾರ್ಯಕ್ರಮದ ನಂತರ ಸಂಸದರು, ಶಾಸಕರು ನೂತನ ರೈಲಿನಲ್ಲಿ ಶಿವಮೊಗ್ಗದಿಂದ ಭದ್ರಾವತಿವರೆಗೆ ಪ್ರಯಾಣ ಬೆಳೆಸಿದರು.