ಹಸಿರು ಭವಿಷ್ಯದ ಕಾರ್ಯಕ್ರಮ
ಸಂಜೆವಾಣಿ ವಾರ್ತೆ
ಹಿರಿಯೂರು.ಜು. 15 –  ತಾಲೂಕಿನ ಎ ವಿ ಕೊಟ್ಟಿಗೆ  ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಬಿ.ಸಿ ಶಿವಣ್ಣ ಫೌಂಡೇಶನ್ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಹಸಿರು ಭವಿಷ್ಯದ   ಪ್ರಕೃತಿಯನ್ನು ಉಳಿಸುವ ಸಣ್ಣ ಹೆಜ್ಜೆ ಎಂಬ ವಿಶೇಷ ಕಾರ್ಯಕ್ರಮವನ್ನು ನಡೆಸಿದರು. ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವುದು, ಗಣ್ಯರಿಗೆ ಸನ್ಮಾನ ನೀಡುವುದು ಹಾಗೂ ವಿದ್ಯಾರ್ಥಿಗಳಿಗೆ  ಉಪಯುಕ್ತ ಮಾಹಿತಿಗಳನ್ನು ನೀಡಿದರು   ವಕೀಲರಾದ ನಾಗರಾಜ್ ಸೇರಿದಂತೆ ಬಿ.ಸಿ ಶಿವಣ್ಣ ಫೌಂಡೇಶನ್ ಟ್ರಸ್ಟ್ ಪದಾಧಿಕಾರಿಗಳು ಶಾಲಾ ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.