ಸ್ವಸಹಾಯ ಸಂಘದ ವಾರ್ಷಿಕೋತ್ಸವ
ಸಂಜೆವಾಣಿ ವಾರ್ತೆ
ಹಿರಿಯೂರು.ಜು. 16- ಹಿರಿಯೂರು ತಾಲ್ಲೂಕಿನ ಆದಿವಾಲ ವಲಯ ವ್ಯಾಪ್ತಿಯ ಟಿ.ಜಿ.  ಕಾಲೋನಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾನವಿ ಸ್ವಸಹಾಯ ಸಂಘದ ವಾರ್ಷಿಕೋತ್ಸವ ನಡೆಯಿತು. ವಲಯದ ಮೇಲ್ವಿಚಾರಕರಾದ ಚಂದ್ರಶೇಖರ್ ಸೇವಾ ಪ್ರತಿನಿಧಿಯಾದ  ಕಾಮಾಕ್ಷಿ ಹಾಗೂ ಸದಸ್ಯರು ಪಾಲ್ಗೊಂಡಿದ್ದರು. ಪರಿಸರ ಸಂರಕ್ಷಣೆಗಾಗಿ ಹಸಿರು ಗಿಡ ಮರಗಳನ್ನು ಬೆಳೆಸುವ ಬಗ್ಗೆ ಸದಸ್ಯರಿಗೆ ಮಾಹಿತಿ ನೀಡಲಾಯಿತು.