ವಾಲ್ಮೀಕಿ ಹಗರಣದಲ್ಲಿ ಸಿಎಂ ಪಾತ್ರವಿಲ್ಲ ;ಕೆಎಚ್‌ಎಂ
ಕೋಲಾರ, ಜು.೧೬- ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಹಗರಣದ ಬಗ್ಗೆ ಈಗಾಗಲೇ ವಿಚಾರಣೆ ನಡೆಯುತ್ತಿದ್ದು ತನಿಖೆಯ ನಂತರವಷ್ಟೇ ವಾಸ್ತುವಂಶಗಳು ಹೊರಬರಲಿದೆ ಎಂದು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದರು.
ನಗರದ ಕುರುಬರಪೇಟೆಯ ಮುನೇಶ್ವರ ದೇವಾಲಯದ ದೀಪೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರದ ಬಗ್ಗೆ ಇಡಿ ಸಂಸ್ಥೆಯಿಂದ ವಿಚಾರಣೆ ನಡೆಯುತ್ತಿದ್ದು ಕಾನೂನು ಪ್ರಕಾರ ಏನಿದ್ದೀಯೋ ಅದನ್ನು ಇಡಿ ತನಿಖೆ ನಡೆಸಲಿದ್ದಾರೆ ಯಾವುದೇ ವಿಷಯದ ಬಗ್ಗೆ ವಿಚಾರಣೆ ನಡೆಯವ ಸಂದರ್ಭದಲ್ಲಿ ಈಗಲೇ ಅಂತಿಮ ನಿರ್ಧಾರವನ್ನು ಹೇಳಲು ಬರುವುದಿಲ್ಲ ಎಂದು ತಿಳಿಸಿದರು.
ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣವು ತನಿಖೆ ಹಂತದಲ್ಲಿ ಇರುವುದರಿಂದ ಯಾವುದೇ ತೀರ್ಮಾನವನ್ನು ತೆಗೆದುಕೊಳ್ಳಲು ಸರಕಾರಕ್ಕೆ ಬರುವುದಿಲ್ಲ ಆದರೆ ವಿರೋಧ ಪಕ್ಷದವರು ರಾಜ್ಯದ ಅಭಿವೃದ್ಧಿ ವಿಚಾರಗಳೊಂದಿಗೆ ರಾಜಕಾರಣವನ್ನು ಮಾಡುವುದನ್ನು ಬಿಟ್ಟು ಸುಮ್ಮನೆ ಆಡಳಿತದ ಪಕ್ಷದ ವಿರುದ್ದ ಮಾತಾಡುವುದೇ ಅವರ ಕೆಲಸವಾಗಿದೆ ಎಂದು ಹೇಳಿದರು
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಂದ ಸುಮಾರು ೪.೫ ಕೋಟಿ ಜನ ನೆಮ್ಮದಿಯಿಂದ ಬದುಕುವ ವಾತಾವರಣವನ್ನು ಕಾಂಗ್ರೆಸ್ ಸರಕಾರ ಮಾಡಿಕೊಟ್ಟಿದೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಯೋಜನೆಯಿಂದ ಅನುಕೂಲವಾಗುವಂತೆ ಮಾಡಿದ್ದಾರೆ ಇಂತಹ ಪವಿತ್ರವಾದ ಕೆಲಸವನ್ನು ಕಾಂಗ್ರೆಸ್ ಸರಕಾರದಿಂದ ಮಾತ್ರವೇ ಸಾಧ್ಯವಾಗಿದೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮಾತನಾಡಿ ಅವರು ಅಂತಹ ತೀರ್ಮಾನ ಇನ್ನೂ ನಡೆದಿಲ್ಲ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್, ವಕ್ತಾರ ಎಲ್.ಎ ಮಂಜುನಾಥ್, ನಗರ ಬ್ಲಾಕ್ ಅಧ್ಯಕ್ಷ ಹಾಗೂ ನಗರಸಭೆ ಸದಸ್ಯ ಪ್ರಸಾದ್ ಬಾಬು, ಕಾಂಗ್ರೆಸ್ ಎಸ್ಸಿ ಘಟಕದ ಅಧ್ಯಕ್ಷ ಜಯದೇವ್, ಎಸ್ಟಿ ಘಟಕದ ಅಧ್ಯಕ್ಷ ಮಂಜುನಾಥ್ ಮುಖಂಡರಾದ ಒಬಿಸಿ ಮಂಜುನಾಥ್, ಕೆ.ಆರ್ ತ್ಯಾಗರಾಜ್, ದೇವುಡು ಮುಂತಾದವರು ಇದ್ದರು,