ಬೈಕ್‍ಗೆ ಬಸ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು
ಕಲಬುರಗಿ,ಜು.15-ಜಿಲ್ಲೆಯ ಕಾಳಗಿ ತಾಲೂಕಿನ ಕಂದಗೋಳ ಬಳಿ ಬೈಕ್‍ಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.
ಮೃತನನ್ನು ಸಾಲಳ್ಳಿ ಗ್ರಾಮದ ನಿವಾಸಿ ಮಲ್ಲಿಕಾರ್ಜುನ (24) ಎಂದು ಗುರುತಿಸಲಾಗಿದೆ.
ಸುದ್ದಿ ತಿಳಿದು ಕಾಳಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.