ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮ, ಶಾಸಕ ಬಿ.ಶಿವಣ್ಣ ಚಾಲನೆ
ಆನೇಕಲ್.ಸೆ.೨೮-ಬೊಮ್ಮಸಂದ್ರ ಪುರಸಭೆ ವ್ಯಾಪ್ತಿಯ ಕಿತ್ತಗಾನಹಳ್ಳಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಿದ್ದ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ೬ ದಿನಗಳು ಪೂರಕ ಪೌಷ್ಠಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಶಾಸಕ ಬಿ.ಶಿವಣ್ಣ ರವರು ಚಾಲನೆ ನೀಡಿ ನಂತರ ಮಾತನಾಡಿದ ಅವರು ಮಕ್ಕಳಲ್ಲಿ ಆರೋಗ್ಯ ವೃದ್ದಿಯಾಗಬೇಕು ಮತ್ತು ಕಲಿಕೆಗೆ ಹೆಚ್ಚು ಉತ್ತೇಜನ ನೀಡಬೇಕು.
ಕಲಿಕೆಯಿಂದ ಯಾವ ಮಕ್ಕಳು ದೂರ ಉಳಿಯಬಾರದು ಎಂಬುವ ಉದ್ದೇಶದಿಂದ ರಾಜ್ಯ ಸರ್ಕಾರ ಮತ್ತು ಅಜೀಂ ಪೇಮ್ ಜಿ ಪೌಂಡೇಷನ್ ಸಹಯೋಗದಲ್ಲಿ ವಾರದಲ್ಲಿ ೬ ದಿನಗಳು ಶಾಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರವನ್ನು ನೀಡುವ ಕಾರ್ಯಕ್ರಮಕಕ್ಕೆ ಚಾಲನೆ ನೀಡಿದ್ದು ಎಲ್ಲಾ ವಿದ್ಯಾರ್ಥಿಗಳು ಪೌಷ್ಠಿಕ ಆಹಾರವನ್ನು ಸೇವಿಸಿ ಆರೋಗ್ಯವನ್ನು ವೃದ್ದಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾದಿಕಾರಿಗಳಾದ ಎಂ.ವೆಂಕಟೇಶ್. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಶಿವಣ್ಣ. ಮುಖಂಡರಾದ ಕಿತ್ತಗಾನಹಳ್ಳಿ ಶಿವಪ್ಪರೆಡ್ಡಿ. ಕೃಷ್ಣಾರೆಡ್ಡಿ ಮತ್ತು ಬೊಮ್ಮಸಂದ್ರ ಪುರಸಭೆಯ ಪರಿಸರ ಅಭಿಯಂತರರಾದ ಶ್ರೀಮತಿ ಉಮಾ. ಹಿರಿಯ ಆರೋಗ್ಯ ನಿರೀಕ್ಷಕರಾದ ಮಂಜುನಾಥ್ ಮತ್ತು ಸುದಾ ಹಿರೇಮಠ್ ಹಾಗೂ ಶಾಲೆಯ ಶಿಕ್ಷಕರು ಮತ್ತು ಸ್ಥಳೀಯ ಮುಖಂಡರು, ವಿದ್ಯಾರ್ಥಿಗಳು ಬಾಗವಹಿಸಿದ್ದರು.