ಗ್ರಾಮ ಪಂಚಾಯಿತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಆನೇಕಲ್.ಸೆ.೨೮-ಹಂದೇನಹಳ್ಳಿ ಗ್ರಾಮ ಪಂಚಾಯಿತಿಯ ೨೦೨೪-೨೫ನೇ ಸಾಲಿನ ಮೊದಲನೆ ಸುತ್ತಿನ ಗ್ರಾಮಸಭೆಯನ್ನು ಆಯೋಜಿಸಲಾಗಿತ್ತು.
ಗ್ರಾಮಸಭೆಯಲ್ಲಿ ಇಲಾಖೆ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯಲ್ಲಿ ದೊರೆಯುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಹಾಗೆಯೇ ಸಾರ್ವಜನಿಕರು ಸಹ ತಮ್ಮ ತಮ್ಮ ಸಮಸ್ಯೆಗಳನ್ನು ಇಲಾಖೆ ಅಧಿಕಾರಿಗಳ ಮತ್ತು ಚುನಾಯಿತ ಪ್ರತಿನಿಧಿಗಳ ಮುಂದೆ ಹೇಳಿಕೊಂಡ ದೃಶ್ಯ ಕಂಡು ಬಂತು ಹಾಗೆಯೇ ಸಾರ್ವಜನಿಕರ ಸಮಸ್ಯೆಗಳನ್ನು ಚುನಾಯಿತ ಪ್ರತಿನಿಧಿಗಳು ಮತ್ತು ಅಭಿವೃದ್ಧಿ ಅಧಿಕಾರಿ ತುಪೇಲ್ ಷರೀಪ್ ಆಲಿಸಿದರು, ಜೊತೆಗೆ ಕೆಲವೊಂದು ಪ್ರಶ್ನೆಗಳಿಗೆ ಸ್ಥಳದಲ್ಲಿಯೇ ಉತ್ತರವನ್ನು ಸಹ ನೀಡಿದರು.
ವಿಶೇಷವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಸುಮಾರು ೫೦ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಇನ್ನು ಮೊದಲನೆ ಸುತ್ತಿನ ಗ್ರಾಮಸಭೆಯ ಅಧ್ಯಕ್ಷತೆಯನ್ನು ಹಂದೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಪ್ಪರವರು ವಹಿಸಿದ್ದರು.
ಸಭೆಯಲ್ಲಿ ಹಂದೇನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತುಪೇಲ್ ಷರೀಪ್. ಉಪಾಧ್ಯಕ್ಷೆ ಆರ್.ರಾಜೇಶ್ವರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್.ವಿ.ಟಿ.ಮಂಜುನಾಥ್, ಚೇತನ್, ದಿವ್ಯ, ರಮ್ಯಾ ಅಶೋಕ್ ರೆಡ್ಡಿ, ನಾರಾಯಣಮ್ಮ, ರುದ್ರಮೂರ್ತಿ, ಜೈಪಾಲರೆಡ್ಡಿ, ಜ್ಯೋತಿ, ಮಿಲ್ಟಿ ಮಂಜುನಾಥ್, ಪ್ರೇಮ್ ಕುಮಾರ್, ಸುದಾ, ಕಾರ್ಯದರ್ಶಿ ಶ್ರೀರಾಮ್ ಮತ್ತು ಇಲಾಖೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಬಾಗವಹಿಸಿದ್ದರು.