ಕಾಂಗ್ರೆಸ್‌ನಿಂದ ಶ್ರೀನಿವಾಸ್‌ಗೆ ಅಭಿನಂದನೆ
ಶಿಡ್ಲಘಟ್ಟ.ಜು.೧೫- ಇತ್ತೀಚೆಗೆ ನಡೆದ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ವಿಜೇತರಾದ ಡಿ.ಟಿ.ಶ್ರೀನಿವಾಸ್ ಅವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶ್ರೀದೇವಿ ಪ್ಯಾಲೇಸ್ ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಆಯೋಜಿಸಿ ಶಿಡ್ಲಘಟ್ಟ ಕ್ಷೇತ್ರದ ಪ್ರಭಾವಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಮತ್ತು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷೆಯಾದ ಸಹನಾ ರಾಜೀವ್ ಗೌಡರಿಂದ ಸನ್ಮಾನಿಸಲಾಯಿತು.
ಶಾಲಾ ಕಾಲೇಜುಗಳ ಅಭಿವೃದ್ಧಿ ಹರಿಕಾರಕ ಡಿ.ಟಿ.ಶ್ರೀನಿವಾಸ್ ರವರು ಕ್ಷೇತ್ರಗಳ ಅಭಿವೃದ್ಧಿ ಹೆಚ್ಚು ಹೊತ್ತು ನೀಡುವುದರ ಮೂಲಕ ತನ್ನದೇ ಆದ ಚಾಪು ಮೂಡಿಸಿರುವ ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವು ಸಾಧಿಸಿರುವ ಡಿ.ಟಿ.ಶ್ರೀನಿವಾಸ್ ರವರಿಗೆ ಅಭಿನಂದನಾ ಕಾರ್ಯಕ್ರಮವನ್ನು ಶನಿವಾರ ಶ್ರೀ ದೇವಿ ಪ್ಯಾಲೇಸ್ ನಲ್ಲಿ ಹಮ್ಮಿಕೊಂಡಿದ್ದ ಸಂದರ್ಭದಲ್ಲಿ ಶುಭ ಕೊರಿ ಮಾತನಾಡಿದರು.
ಡಿ ಟಿ ಶ್ರೀನಿವಾಸ್ ರವರನ್ನು ಈ ಬಾರಿ ಗೆಲುವಿಗೆ ಕಾರಣರಾದ ಕ್ಷೇತ್ರದ ಎಲ್ಲಾ ಶಿಕ್ಷಕರಿಗೂ ಧನ್ಯವಾದಗಳು ಸಲ್ಲಿಸಿದರು. ಸದಾ ನಿಮ್ಮೊಂದಿಗೆ ನಿಮ್ಮ ಮನೆಮಗನಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ನಿಮ್ಮೊಂದಿಗೆ ಇದ್ದು ನಿಮ್ಮ ಸೇವೆ ಮಾಡುತ್ತೇನೆ ಎಂದು ಶಿಡ್ಲಘಟ್ಟ ಕ್ಷೇತ್ರದಲ್ಲಿ ಮನೆ ಮಾತಾಗಿರುವ ರಾಜೀವ್ ಗೌಡರು ತಿಳಿಸಿದರು.
ಸಮಾರಂಭದಲ್ಲಿ ಮಾನ್ಯ ಉನ್ನತ ಶಿಕ್ಷಣ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಸಿ.ಸುಧಾಕರ್, ಹಾಗೂ ನಮ್ಮ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ, ಕೆ ಪಿ ಸಿ ಸಿ ಸಂಯೋಜಕರಾದ ಬಿ.ವಿ.ರಾಜೀವ್ ಗೌಡರು ಹಾಗೂ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದ ಶಾಸಕರು, ಅಭ್ಯರ್ಥಿಗಳು, ಮಾಜಿ ಶಾಸಕರುಗಳು, ಲೋಕಸಭೆಯ ಅಭ್ಯರ್ಥಿಗಳು ಮಾಜಿ ಸದಸ್ಯರುಗಳು ಆಗಮಿಸಿ ಕಾರ್ಯಕ್ರಮದ ಮೆರಗು ಹೆಚ್ಚಿಸಿದರು.