ಬ್ಯಾಂಕುಗಳು ಖಾಸಗೀಕರಣವಾದರೆ ದೇಶಾಭಿವೃದ್ಧಿ:ಡಾ.ಜೆ.ಆರ್.ಷಣ್ಮುಖಪ್ಪ

ಸಂಜೆವಾಣಿ ವಾರ್ತೆ
ದಾವಣಗೆರೆ.ಜು.೧೪: ಉತ್ತಮ ಸೇವೆ ಮತ್ತು ದೇಶದ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಷ್ಟಿçÃಕೃತ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವುದು ಅಥವಾ ಅಧಿಕಾರ ವಿಕೇಂದ್ರೀಕರಣ ಮಾಡುವುದು ಉತ್ತಮ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನಿರ್ದೇಶಕ ಜೆ.ಆರ್.ಷಣ್ಮುಖಪ್ಪ ಅಭಿಪ್ರಾಯಿಸಿದರು. ನಗರದ ಬಾಪೂಜಿ ಎಂಬಿಎ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು, ದಾವಣಗೆರೆ ಜಿಲ್ಲಾ ಸಹಕಾರ ಒಕ್ಕೂಟ ನಿಯಮಿತ, ಸಹಕಾರ ಇಲಾಖೆ ವತಿಯಿಂದ ಜಿಲ್ಲೆಯ ಪಟ್ಟಣ ಸಹಕಾರ ಬ್ಯಾಂಕುಗಳು ಮತ್ತು ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಹಮ್ಮಿಕೊಂಡಿದ್ದ ಒಂದು ದಿನದ ರಾಜ್ಯ ಮಟ್ಟದ ವಿಶೇಷ ಕಾರ್ಯದಕ್ಷತೆ ತರಬೇತಿ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಜವಾಬ್ದಾರಿಗಳು ಕಡಿಮೆಯಾಗುತ್ತಿರುವ ಈ ದಿನಗಳಲ್ಲಿ ಬ್ಯಾಂಕುಗಳ ಖಾಸಗೀಕರಣ ಅಥವಾ ಅಧಿಕಾರ ವಿಕೇಂದ್ರೀಕರಣವಾದರೆ ಆ ಬ್ಯಾಂಕುಗಳ ಆಡಳಿತ ಮತ್ತು ಹಣಕಾಸು ಸ್ಥಿತಿ ಹತೋಟಿಯಲ್ಲಿರುತ್ತದೆ. ಆಗ ಸಾರ್ವಜನಿಕರ ವ್ಯವಹಾರಗಳು ಸುಗಮವಾಗಿರುತ್ತವೆ. ಸಿಬ್ಬಂದಿಗಳಿಗೆ ರಾಜ್ಯ ಹಾಗೂ ರಾಷ್ಟçದ ಬಗ್ಗೆ ಚಿಂತನೆ, ಜನರ ಸೇವೆ ಮಾಡುವ ಮನಸ್ಥಿತಿ ಬೆಳೆಯುತ್ತದೆ ಎಂದರು.ಕೆಲ ರಾಷ್ಟಿçÃಕೃತ ಬ್ಯಾಂಕುಗಳಲ್ಲಿ ಸಣ್ಣ ಹಣಕಾಸಿನ ವ್ಯವಹಾರÀಕ್ಕೂ ಇಡೀ ದಿನ ಕಾಯಬೇಕಾದ ಸ್ಥಿತಿ ಇದೆ. ಅಲ್ಲದೇ ಗ್ರಾಹಕರ ಸಮಸ್ಯೆಗಳಿಗೆ ಸಿಬ್ಬಂದಿಗಳು ಸರಿಯಾಗಿ ಸ್ಪಂದಿಸುವುದಿಲ್ಲ. ಈ ರೀತಿಯ ಸಮಸ್ಯೆಗಳನ್ನು ದಾವಣಗೆರೆ ಸೇರಿದಂತೆ ದೇಶದ ಎಲ್ಲ ಕಡೆಗಳಲ್ಲಿ ಜನರು ನಿತ್ಯ ಅನುಭವಿಸುತ್ತಿದ್ದಾರೆ. ಅದೇ ಖಾಸಗಿ ಬ್ಯಾಂಕುಗಳಲ್ಲಿ ಸೌಹಾರ್ಧಯುತ ವಾತಾವರಣವಿದ್ದು, ಗ್ರಾಹಕರ ಕೆಲಸಗಳು ತ್ವರಿತವಾಗಿ ನಡೆಯುತ್ತವೆ ಎಂದರು.ಪ್ರತಿಯೊAದು ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಸರಿಯಾದ ತರಬೇತಿಯ ಅಗತ್ಯವಿದೆ. ಅದರಲ್ಲೂ ವಿಶೇಷವಾಗಿ ಬ್ಯಾಂಕ್ ಸಿಬ್ಬಂದಿಗಳಿಗೆ ಸರಿಯಾದ ತರಬೇತಿ ನೀಡಿದ್ದೇ ಆದಲ್ಲಿ ದೇಶದ ಆರ್ಥಿಕತೆ ಸಮೃದ್ಧಿಯಾಗಿ ಬೆಳೆಯಲಿದೆ. ಸಹಕಾರಿ ಕ್ಷೇತ್ರದಿಂದ ಮಾತ್ರವೇ ದೇಶದ ಪ್ರಗತಿ ಸಾಧ್ಯ ಎಂದು ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅಂದೇ ಮನಗಂಡಿದ್ದರು. ಅದರ ಪರಿಣಾಮವಾಗಿ ಇಂದು ಕೇಂದ್ರ ಸರ್ಕಾರ ಗ್ರಾಮ ಮಟ್ಟದಿಂದಲೂ ಸಹಕಾರಿ ಕ್ಷೇತ್ರವನ್ನು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸುತ್ತಿದೆ ಎಂದರು.