ರೈಲಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ
ಸಂಜೆವಾಣಿ ವಾರ್ತೆದಾವಣಗೆರೆ.ಜು.೧೫;ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ಶಾಸಕರು ಆದಂತಹ ಡಾ. ಶಾಮನೂರು ಶಿವಶಂಕರಪ್ಪ  ನವರು  ವಂದೇ ಭಾರತ್ ಎಕ್ಸಪ್ರೆಸ್ ರೈಲಿನಲ್ಲಿ ದಾವಣಗೆರೆಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು, ಸದಾ ತಮ್ಮ ಸ್ವಂತ ಹೆಲಿಕ್ಯಾಪ್ಟರ್ ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಇವರು  ರೈಲಿನಲ್ಲಿ ಪ್ರಯಾಣಿಸಿದ್ದು ವಿಶೇಷವಾಗಿತ್ತು.