7ನೇ ವೇತನ ಜಾರಿಗೆ ಆಗ್ರಹಿಸಿ ಮನವಿ
ಇಂಡಿ:ಜು.14: ಇಂಡಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಾ ಸರ್ಕಾರಿ ನೌಕರರ ಸಂಘದ ವತಿಯಿಂದ ಇಂದು ಕರ್ನಾಟಕ ಸರಕಾರದ ಅಂದಾಜು ಸಮಿತಿ ಅಧ್ಯಕ್ಷ ಹಾಗೂ ಶಾಸಕ ಯಶವಂತರಾಯಗೌಡ ಪಾಟೀಲ ಇವರಿಗೆ 7ನೇ ವೇತನ ಜಾರಿಗೆ ಆಗ್ರಹಿಸಿ ಮುಖ್ಯ ಮಂತ್ರಿಗಳ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿ ಕ.ರಾ.ನೌ.ಸಂಘದ ತಾಲೂಕಾ ಶಾಖೆಯ ಅಧ್ಯಕ್ಷರು ,ಪದಾಧಿಕಾರಿಗಳು ಪ್ರವಾಸಿ ಮಂದಿರದಲ್ಲಿ ಮನವಿ ಸಲ್ಲಿಸಿದರು.
ಈ ಸಂಧರ್ಬದಲ್ಲಿ ಕ.ರಾ.ನೌ.ಸಂಘದ ತಾಲೂಕಾ ಅಧ್ಯಕ್ಷ ಎಸ್.ಡಿ ಪಾಟೀಲ ಮಾತನಾಡಿ ಸರಕಾರ 7ನೇ ವೇತನ ಜಾರಿಗೆ ಮಾಡಬೇಕು. ಕರ್ನಾಟಕ ಸರಕಾರ 7ನೇ ವೇತನ ಆಯೋಗದಿಂದ ಶೀಘ್ರ ವರದಿಯನ್ನು ಪಡೇದು ದಿ.1ಜುಲೈ 2022 ರಿಂದ ಅನ್ವಯವಾಗುವಂತೆ ವೇತನ ನಿಗದಿಪಡಿಸಿ 01 ಎಪ್ರೀಲ್ 2024 ರ ಅರ್ಥಿಕ ಸೌಲಭ್ಯ ನೀಡಿ ಸರಕಾರಿ ಆದೇಶ ಹೊರಡಿಸಬೇಕು. ಎನ್.ಪಿ.ಎಸ್ ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆ ಜಾರಿಗೆ ತರಬೇಕು. ರಾಜ್ಯ ಸರಕಾರಿ ನೌಕರರು ಮತ್ತು ಅವರ ಅವಲಂಭಿತ ಕುಟುಂಬ ಸದಸ್ಯರುಗಳಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಕೂಡಲೆ ಜಾರಿ ಮಾಡಬೇಕು. ಎನ್.ಪಿ.ಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರಕಾರದ ಜವಾಬ್ದಾರಿಯಾಗಿದೆ. ಪಂಜಾಬ, ರಾಜಸ್ಥಾನ ಇತರೆ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿ ಮಾಡಿವೆ ನಮ್ಮ ರಾಜ್ಯದಲ್ಲಿ ಕೂಡಾ ತರಬೇಕು ರಾಜ್ಯ ಸರಕಾರಿ ನೌಕರರ 3 ಪ್ರಮುಖ ಬೇಡಿಕೆಗಳುನ ಇಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕ.ರಾ.ನೌ.ಸಂಘದ ರಾಜ್ಯ ಸರಕಾರಿ ನೌಕರರ ಬಹುದಿನಗಳ ಕುಲಂಕುಶ ಬೇಡಿಗಳು ಮಾನ್ಯ ಮುಖ್ಯ ಮಂತ್ರಿಗಳ ಗಮನಕ್ಕೆ ತರುವುದರೊಂದಿಗೆ ನಿಮ್ಮ 3 ಬೇಡಿಕೆಗಳು ನ್ಯಾಯಯುತವಾಗಿವೆ ಪ್ರಮಾಣಿವಾಗಿ ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.
ಶಾಸಕ ಯಶವಂತರಾಯಗೌಡ ಪಾಟೀಲ.