ರಾಜ್ಯಮಟ್ಟದ ಪವರ್ ಲಿಫ್ಟಿಂಗ್: ದೀಪಕ್‍ಗೆ ರಜತ ಪದಕ
ಸಂಜೆವಾಣಿ ವಾರ್ತೆ
ಹೊಸಪೇಟೆ ಜು14: ನಗರದ ಪಿಡಿಐಟಿ ಕಾಲೇಜ್ ವಿದ್ಯಾರ್ಥಿ (ಮೆಕ್ಯಾನಿಕಲ್ ವಿಭಾಗ) ದೀಪಕ್ ಬೆಳಗಲ್, ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ರಜತ ಪದಕ ಗಳಿಸುವ ಮೂಲಕ ವಿಜಯನಗರ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಬೆಂಗಳೂರಿನ ನ್ಯೂ ಹಾರಿಜನ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ವಿ.ಟಿ.ಯು. ರಾಜ್ಯಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿಯ ಪದಕ ಗಳಿಸಿದ್ದಾರೆ. ಪಿಡಿಐಟಿ ಆಡಳಿತ ಮಂಡಳಿ ಅಧ್ಯಕ್ಷ ಕರಿಬಸವರಾಜ ಬಾದಾಮಿ, ಪ್ರಾಂಶುಪಾಲ ಡಾ.ಯು.ಎಂ.ರೋಹಿತ್, ಉಪಪ್ರಾಂಶುಪಾಲ ಪ್ರೊ|| ಪಾರ್ವತಿ ಕಡ್ಲಿ, ದೈಹಿಕ ಶಿಕ್ಷಣ ನಿರ್ದೇಶಕ ಕೆ.ಎಸ್.ಮಂಜುನಾಥ್ ಅಭಿನಂದನೆ ಸಲ್ಲಿಸಿದ್ದಾರೆ.