ವಿಶ್ವ ಜನಸಂಖ್ಯಾ ದಿನಾಚರಣೆ
ಬಾಗಲಕೋಟ, ದಿ. 14: ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ ಶಾರದಾಂಬೆ ನರ್ಸಿಂಗ್ ಮಹಾವಿದ್ಯಾಲಯದಲ್ಲಿ ಸಮುದಾಯ ಆರೋಗ್ಯ ಶುಶ್ರೂಷಾ ವಿಭಾಗ ವತಿಯಿಂದ ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಪ್ರಾಂಶುಪಾಲರಾದ ಡಾಕ್ಟರ್ ಪ್ರವೀಣ್ ಎಸ್ ಪಾಟೀಲ ವಹಿಸಿಕೊಂಡಿದ್ದರು. ಅಧ್ಯಕ್ಷೀಯ ಭಾಷಣ ಮಾಡಿದ ಡಾಕ್ಟರ್ ಪ್ರವೀಣ್ ಪಾಟೀಲ್ ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯಿಂದ ಪರಿಸರದಲ್ಲಿ ಸಹಜವಾದ ಬದಲಾವಣೆಯಾಗುತ್ತಿದ್ದು ಅದು ವರ್ಷದಿಂದ ವರ್ಷಕ್ಕೆ ಜನಸಂಖ್ಯೆ ಪ್ರಮಾಣ ಹೆಚ್ಚುತ್ತಿದೆ ಆದ್ದರಿಂದ ಆರೋಗ್ಯ ಕ್ಷೇತ್ರದಲ್ಲಿ ಹಲವಾರು ಬದಲಾವಣೆಗಳ ಅಗತ್ಯವಿದೆ ಎಂದು ಹೇಳಿದರು. ಜನಸಂಖ್ಯೆಯ ನಿಯಂತ್ರಣಕ್ಕೆ ಹಲವಾರು ಮಾರ್ಗಗಳಿದ್ದು ವೈದ್ಯಕೀಯ ಮಾರ್ಗಗಳನ್ನು ನರ್ಸಿಂಗ್ ವಿದ್ಯಾರ್ಥಿಗಳು ಆಸ್ಪತ್ರೆಗೆ ಬರುವ ಜನರಿಗೆ ತಿಳಿಹೇಳಿ ಅವರಿಗೆ ಮೌಲ್ಯಯುತ ಶಿಕ್ಷಣವನ್ನು ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಅತಿಯಾದ ಜನಸಂಖ್ಯಾ ಸಾಂದ್ರತೆಯು ಹಲವಾರು ರೀತಿಯ ಅನಾನುಕೂಲಗಳಿಗೆ ಎಡೆ ಮಾಡಿಕೊಡುತ್ತಿದ್ದು ಇದರಿಂದ ದೇಶದ ಪ್ರಗತಿಯು ಕುಂಠಿತವಾಗಿದೆ. ಹೆಚ್ಚುತ್ತಿರುವ ಜನಸಂಖ್ಯೆಯಿಂದ ರೋಗಗಳ ಹರಡುವಿಕೆಯ ಪ್ರಮಾಣವು ಹೆಚ್ಚುತ್ತಿದ್ದು ಆದಕಾರಣ ಶುಶೃಷಕರು ಹೆಚ್ಚಿನ ಜಾಗ್ರತೆ ವಹಿಸಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಶ್ರೀಮತಿ ಸವಿತಾ ಅಂಗಡಿ ಮಾತನಾಡಿ ಜನಸಂಖ್ಯೆ ಹೆಚ್ಚುತ್ತಿರುವ ಕಾರಣಗಳು ಮತ್ತು ಅವುಗಳಿಂದ ಸಮಾಜದಲ್ಲಿ ಉಂಟಾಗುತ್ತಿರುವ ಪರಿಣಾಮಗಳನ್ನು ವಿವರಿಸಿದರು.
ವಿಶ್ವ ಜನಸಂಖ್ಯಾ ದಿನದ ಅಂಗವಾಗಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ನಿರೂಪಣಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯ ಶುಶ್ರೂಷಾ ವಿಭಾಗದ ಮುಖ್ಯಸ್ಥರಾದ ಕುಮಾರಿ ವೀಣಾ ಮದಿ, ಶ್ರೀಮತಿ ಸುಷ್ಮಾ, ಕುಮಾರಿ ಪವಿತ್ರಾ ಮತ್ತು ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಮಹಾವಿದ್ಯಾಲಯದ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.