ಕಲ್ಲಿನಿಂದ ಹೊಡೆದು ವ್ಯಕ್ತಿ ಕೊಲೆ
ಚಿಂಚೋಳಿ,ಜು.13-ತಾಲ್ಲೂಕಿನ ಭೀಮಾ ಹೊಸಹಳ್ಳಿಯ ಹೊಲ ಒಂದರಲ್ಲಿ ಕಲ್ಲಿನಿಂದ ಹೊಡೆದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಲಾಗಿದೆ.
ಕೊಲೆಯಾದ ವ್ಯಕ್ತಿಯನ್ನು ಚಿಂಚೋಳಿ ತಾಲ್ಲೂಕಿನ ಕುಸರಂಪಳ್ಳಿ ಗ್ರಾಮದ ಮಹೇಶ ತಂದೆ ಹಣಮಂತ (30) ಎಂದು ಗುರುತಿಸಲಾಗಿದೆ.
ಕೊಲೆಯಾದ ಮಹೇಶ ಭೀಮಾ ಹೊಸಹಳ್ಳಿಯಲ್ಲಿ ವಾಸವಾಗಿದ್ದ ಎಂದು ತಿಳಿದುಬಂದಿದೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ. ಸುದ್ದಿ ತಿಳಿದು ಚಿಂಚೋಳಿ ಪಿಎಸ್‍ಐ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.