ವಿಶೇಷ ಕಾರ್ಯಾಚರಣೆ ನಡೆಸಿ 130 ಗ್ರಾಂ.ಗಾಂಜಾ ವಶ
ಕಲಬುರಗಿ,ಜು.12-ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಹಾಗೂ ಗಾಂಜಾ ಮಾರಾಟ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು ರೋಜಾ, ಸಿಇಎನ್ ಹಾಗೂ ಬ್ರಹ್ಮಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು 1300 ರೂ.ಮೌಲ್ಯದ 130 ಗ್ರಾಂ.ಗಾಂಜಾ ವಶಪಡಿಸಿಕೊಂಡಿದ್ದಾರೆ.
ನಗರ ಪೊಲೀಸ್ ಆಯುಕ್ತ ಚೇತನ್ ಆರ್.ಅವರ ನಿರ್ದೇಶನದ ಮೇರೆಗೆ ಗಾಂಜಾ ಸೇವನೆ ಹಾಗೂ ಮಾರಾಟ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಯಾರೂ ಸಹ ಗಾಂಜಾ ಸೇವನೆ ಹಾಗೂ ಮಾರಾಟದಂತಹ ಚಟುವಟಕೆಗಳಲ್ಲಿ ಭಾಗವಹಿಸಬಾರದು ಎಂದು ತಿಳಿಸಲಾಗಿದೆ.