ಶಾಸಕ ಯತ್ನಾಳ ವಿರುದ್ಧದ ಚುನಾವಣೆ ಅರ್ಜಿ ವಜಾ
ವಿಜಯಪುರ,ಜು.13: ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ದಾಖಲಿಸಿದ್ದ ಚುನಾವಣಾ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ. ಇದಲ್ಲದೆ ಅರ್ಜಿದಾರರಿಗೆ ರೂ.1 ಲಕ್ಷ ದಂಡ ವಿಧಿಸಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್‍ಹಮೀದ್ ಮುಶ್ರೀಫ್, ಹತಾಶರಾಗಿ 2023 ರ ಜೂನ್ 23 ರಂದು ದೂರು ನೀಡಿದ್ದರು. ಇದೀಗ ನ್ಯಾಯಾಲಯವು ಅರ್ಜಿ ವಜಾಗೊಳಿಸಿದಲ್ಲದೆ, ಅರ್ಜಿದಾರನಿಗೆ ರೂ.1 ಲಕ್ಷ ದಂಡ ವಿಧಿಸಿದೆ.