ಐದು ಮನೆಗಳಲ್ಲಿ ಸರಣಿ ಕಳ್ಳತನ; ಸಿಸಿ ಟಿವಿಯಲ್ಲಿ ಸೆರೆಯಾದ ದೃಶ್ಯಾವಳಿ
ಚಿತ್ತಾಪುರ: ಜು.13:ಪಟ್ಟಣದ ಆಶ್ರಯ ಕಾಲೋನಿಯ ನಾಲ್ಕು ಮನೆ ಮತ್ತು ವೆಂಕಟೇಶ್ವರ ಕಾಲೋನಿಯ ಒಂದು ಮನೆ ಸೇರಿ ಒಟ್ಟು ಐದು ಮನೆಗಳಲ್ಲಿ ಶುಕ್ರವಾರ ರಾತ್ರಿ ಕಳ್ಳತನ ನಡೆದಿರುವ ಬಗ್ಗೆ ವರದಿಯಾಗಿದೆ.
ಐದು ಜನ ಕಳ್ಳರು ಮನೆಗಳ ಬೀಗ ಮುರಿದು ಕಳ್ಳತನ ಮಾಡಿ ಪರಾರಿಯಾಗುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸುದ್ದಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶಂಕರ್ ಗೌಡ ಪಾಟೀಲ್, ಸಿಪಿಐ ಚಂದ್ರಶೇಖರ ತಿಗಡಿ, ಪಿಎಸ್‍ಐಗಳಾದ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ, ಸಿಬ್ಬಂದಿಗಳಾದ ನಾಗೇಂದ್ರ, ಅಯ್ಯಣ್ಣ ಸೇರಿದಂತೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರೀಶಿಲನೆ ನಡೆಸಿದರು. ಈ ಕುರಿತು ಚಿತ್ತಾಪುರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೆÇಲೀಸರು ತನಿಖೆ ನಡೆಸುತ್ತಿದ್ದಾರೆ.