ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ: ಪೂರ್ವಭಾವಿ ಸಭೆ
ಧಾರವಾಡ,ಜು13: ಪ್ರತಿ ವರ್ಷದಂತೆ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿಯನ್ನು ಜುಲೈ 21 ರಂದು ಆಚರಿಸುವ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು.
ಅವರು ಮಾತನಾಡಿ, ಜುಲೈ 21 ರಂದು ಬೆಳಗ್ಗೆ 11 ಗಂಟೆಗೆ ಶ್ರೀ ಶಿವಶರಣ ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಿಸಲಾಗುವುದು. ಜಯಂತಿ ಕಾರ್ಯಕ್ರಮವನ್ನು ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕøತಿಕ ಸಭಾಭವನದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು ಎಂದು ಅವರು ತಿಳಿಸಿದರು.
ಸಭೆಗೆ ವಿವಿಧ ಸಮಾಜದ ಮುಖಂಡರು ಭಾಗವಹಿಸಿ ಸಲಹೆ, ಸೂಚನೆ ನೀಡಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.