ಮುಡಾ ಹಗರಣದಲ್ಲಿ ಸಿಎಂ ನೇರಪಾತ್ರ
ಹುಬ್ಬಳ್ಳಿ, ಜು 13: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯನವರ ನೇರ ಪಾತ್ರವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ವ್ಯವಸ್ಥಿತವಾಗಿ ಬೆಲೆ ಬಾಳುವ 14 ನಿವೇಶನಗಳನ್ನು ಗುಳುಂ ಮಾಡಿದ್ದು, ಸಿದ್ಧರಾಮಯ್ಯ ಓರ್ವ ಭ್ರಷ್ಟ ಮುಖ್ಯಮಂತ್ರಿ ಎಂದು ಟೀಕಿಸಿದರು.
ಕೂಡಲೇ ಸಿದ್ಧರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಅವರ ವಿರುದ್ಧ ಸೂಕ್ತ ತನಿಖೆಯಾಗಬೇಕು ಎಂದು ಜೋಶಿ ಆಗ್ರಹಿಸಿದರು.
ಈ ಹಗರಣದಲ್ಲಿ ಬಿಜೆಪಿಯವರಿದ್ದರೆ ಅವರ ಮೇಲೂ ಕ್ರಮವಾಗಲಿ ಎಂದವರು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಸಂಪೂರ್ಣವಾಗಿ ಸಿದ್ಧರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರಿಗೆ ಗೊತ್ತೀದ್ದೇ ನಡೆದಿರುವ ಭ್ರಷ್ಟಾಚಾರ. ಇದು ಪ್ರತಿಶತ ನೂರರಷ್ಟು ಭ್ರಷ್ಟಾಚಾರ ಸರ್ಕಾರ ಎಂದು ಅವರು ನುಡಿದರು.