ದೈಹಿಕ ಸದೃಢತೆಗೆ ಕ್ರೀಡೆಗಳು ಅಗತ್ಯ
ಬಾಗಲಕೋಟೆ,ಜು13 : ವಿದ್ಯಾರ್ಥಿಗಳು ದೈಹಿಕವಾಗಿ ಸದೃಡವಾಗಲು ಕ್ರೀಡೆಗಳು ಅಗತ್ಯವಾಗಿದ್ದು, ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ಪ್ರೋ, ನಂಜುಂಡಸ್ವಾಮಿ ಹೇಳಿದರು.
ಅವರು ನಗರದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯ ಬಾಗಲಕೋಟೆಯಲ್ಲಿ 2023-24ನೇ ಸಾಲಿನ ಬಿ.ಕಾಂ, ಬಿ.ಬಿ.ಎ, ಎಂ.ಕಾಂ ವಿಭಾಗದ ವಿದ್ಯಾರ್ಥಿಗಳಿಗಾಗಿ ವಾರ್ಷಿಕ ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಮಾನಸಿಕವಾಗಿ ದೈಹಿಕವಾಗಿ ಸದೃಢವಾಗಲು ಕ್ರೀಡೆಗಳು ಅತ್ಯವಶ್ಯಕ. ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗಳು ಪಂದ್ಯಾವಳಿಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ತಮ್ಮ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಯತ್ನ ಪಡಬೇಕು ಎಂದರು.
ಕಾರ್ಯಕ್ರಮದಲ್ಲಿ ಐಕ್ಯೂ ಎಸಿ ಸಂಯೋಜಕರಾದ ಶ್ರೀಮತಿ ಗಿರಿಜಾ ನಾವದಗಿ ಹಾಗೂ ಶ್ರೀ ಎಸ್. ಎಸ್. ಕೋಟ್ಯಾಳ್ ಹಾಗೂ ಮಹಾವಿದ್ಯಾಲಯದ ಎಲ್ಲ ಪ್ರಾಧ್ಯಾಪಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಿವೆ.