ಕ್ರೀಡೆ ಮತ್ತು ಸಾಂಸ್ಕøತಿಕ ಚಟುವಟಿಕೆಗಳ ಉದ್ಘಾಟನೆ
ಬಾದಾಮಿ,ಜು13: ಪ್ರತಿ ಮಗುವಿನ ವ್ಯಕ್ತಿತ್ವ ವಿಕಸನದಲ್ಲಿ ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳು ಪೂರಕವಾಗಿ ಕಾರ್ಯ ಮಾಡುತ್ತವೆ ಮಕ್ಕಳು ಈ ಎಲ್ಲಾ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ವ್ಯಕ್ತಿತ್ವ ನಿರ್ಮಾಣ ಮಾಡಿಕೊಳ್ಳುವುದರ ಮೂಲಕ ಸಮಾಜ ಹಾಗೂ ಶಾಲೆಗೆ ಕೀರ್ತಿ ತರಬೇಕೆಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಹಳಗೇರಿ ಹೇಳಿದರು
ಅವರು ತಾಲೂಕಿನ ಯಂಕಂಚಿ ಮಣಿನಾಗರ ಗ್ರಾಮದ ಕಸ್ತೂರಬಾಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಕ್ರೀಡೆ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ತಾಲೂಕಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಉಜ್ವಲ್ ಬಸರಿ ಮಾತನಾಡಿ ತಾಲೂಕಿನಲ್ಲಿಯೇ ವಿಶೇಷ ಹಾಗೂ ವಿಶಿಷ್ಟವಾದ ಈ ಶಾಲೆಯಲ್ಲಿ ಪ್ರವೇಶ ಪಡೆದ ಮಕ್ಕಳೇ ಪುಣ್ಯವಂತರು ಈ ಶಾಲೆಯಲ್ಲಿಯ ಶಿಸ್ತು ಹಾಗೂ ಬೋಧನೆಯ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆದುಉತ್ತಮ ಪ್ರಜೆಗಳಾಗಬೇಕೆಂದು ಹೇಳಿದರು. ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕಿ ಆರ್.ವ್ಹಿ.ಗೌಡಪ್ಪಗೌಡ್ರ ಮಾತನಾಡಿ ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆ ಹಾಗೂ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಿರಂತರವಾಗಿ ಶಾಲೆಯಲ್ಲಿ ನಡೆಯುವಂತಾಗಲಿ ಪ್ರತಿಯೊಂದು ಮಗುವೂ ತಮ್ಮಲ್ಲಿರುವ ಸುಪ್ತ ಪ್ರತಿಭೆಯನ್ನು ಪ್ರದರ್ಶಸಿಲು ಇದು ವೇದಿಕೆಯಾಗಲಿ ಎಂದು ಹಾರೈಸಿದರು. ಸ್ಥಳೀಯ ಶಾಲೆಯ ಮುಖ್ಯಶಿಕ್ಷಕಿ ಬಸಮ್ಮಾ ನರಸಾಪೂರ ಅಧ್ಯಕ್ಷತೆ ವಹಿಸಿದ್ದರು. ಸಹಶಿಕ್ಷಕಿ ಅನಿತಾ ಜಲಗೇರಿ ಹಾಗೂ ಶಾಲೆಯಎಲ್ಲ ಶಿಕ್ಷಕಿಯರು ಕಾರ್ಯಕ್ರಮದಲ್ಲಿ ಹಾಜರಿದ್ದರು.