ಜನರ ಸಮಸ್ಯೆಗಳಿಗೆ ಧ್ವನಿಯಾಗಿ ಕೆಲಸ ಮಾಡಿ
ಕೋಲಾರ,ಜು.೧೩- ಅಬಕಾರಿ ಅಧಿಕಾರಿಗಳು ಕೇವಲ ಸಿಎಲ್-೭ ಅನುಮತಿ ನೀಡಕ್ಕೆ ಅಷ್ಟೇ ಸೀಮಿತವಾಗಿದ್ದಾರೆ ಗ್ರಾಮೀಣ ಪ್ರದೇಶದ ಚಿಲ್ಲರೆ ಅಂಗಡಿಗಳಲ್ಲಿ ಮದ್ಯ ಮಾರಾಟವಾಗುತ್ತಿದ್ದರೂ ಅಧಿಕಾರಿಗಳು ಮಾತ್ರ ತಮಗೆ ಸಂಬಂಧವಿಲ್ಲದ ರೀತಿಯಲ್ಲಿ ಕೈಕಟ್ಟಿ ಕುಳಿತಿದ್ದಾರೆ ಇದು ಕೂಡಲೇ ಸರಿಹೋಗಬೇಕು ಇಲ್ಲದೇ ಹೋದರೆ ಮುಂದಿನ ಪರಿಣಾಮ ಬೇರೆ ರೀತಿಯಲ್ಲಿ ಇರುತ್ತೇ ಎಂದು ಅಬಕಾರಿ ಅಧಿಕಾರಿಗಳನ್ನು ಶಾಸಕ ಕೊತ್ತೂರು ಜಿ ಮಂಜುನಾಥ್ ಸಭೆಯಲ್ಲಿ ತೀವ್ರ ತರಾಟೆಗೆ ತೆಗೆದುಕೊಂಡರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಶುಕ್ರವಾರ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ವತಿಯಿಂದ ನಡೆದ ಜನಸ್ಪಂದನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯಲ್ಲಿನ ಮದ್ಯವು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಸರಬರಾಜು ಆಗಿದೆ ಎಂದು ಪಕ್ಷದ ರಾಜ್ಯಗಳ ಜಿಲ್ಲಾಧಿಕಾರಿ, ಎಸ್ಪಿಗಳು ಪೋನ್ ಮಾಡತ್ತಾರೆ ಎಂದರೆ ಇಲ್ಲಿನ ಅಧಿಕಾರಿಗಳ ಕೆಲಸ ಏನು ನೇರವಾಗಿ ಹೇಳೋದು ನನ್ನ ಅಭ್ಯಾಸ ನಮಗೆ ಗೊತ್ತಿದೆ ನಿಮ್ಮನ್ನು ಏನು ಮಾಡಬೇಕು ಅಂತ ಅಧಿಕಾರಿಗಳ ವಿರುದ್ದ ಗರಂ ಆದರು,
ಇವತ್ತಿನ ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಗ್ರಾಮೀಣ ಪ್ರದೇಶಗಳಲ್ಲಿ ಪಂಚಾಯತಿ ಪಿಡಿಒ, ಕಾರ್ಯದರ್ಶಿಗಳು ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡಿಲ್ಲ ಕಾಂಗ್ರೆಸ್ ಪಕ್ಷದ ಸಮಾಜಿಕ ಜಾಲತಾಣದ ತಂಡದ ಮುತುವರ್ಜಿಯಿಂದ ಸೋಷಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ್ದಕ್ಕಾಗಿ ಇವತ್ತು ಇಷ್ಟು ಜನ ಬಂದಿದ್ದಾರೆ ಜನಸಾಮಾನ್ಯರು ತಮ್ಮ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಳ್ಳಲು ಜನಸ್ಪಂದನ ಒಂದು ಉತ್ತಮ ಅವಕಾಶವಾಗಿದೆ. ಇದನ್ನು ಜನರು ಸದುಪಯೋಗ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು,
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಮಾತನಾಡಿ ಅಧಿಕಾರಿ ಮತ್ತು ಜನಪ್ರತಿನಿಧಿಗಳ ಮೇಲೆ ಇದೆ ಕಾಂಗ್ರೆಸ್ ಸರಕಾರ ಬಂದ ನಂತರ ವಿಶೇಷ ಯೋಜನೆಗಳ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಸರಕಾರ ಎಂಬುದನ್ನು ನಿರೂಪಿಸಿದ್ದಾರೆ ಎಂದು ತಿಳಿಸಿದರು.
ಸರಕಾರವು ಸಾಮಾನ್ಯ ಜನರ ಸಮಸ್ಯೆಗಳಿಗೆ ದ್ವನಿಯಾಗುವ ಉದ್ದೇಶದಿಂದ ಜನರ ಸಮಸ್ಯೆಗಳು ಅನೇಕ ಸಮಯದಿಂದ ಬಾಕಿ ಉಳಿದಿದ್ದು ವಿವಿಧ ಇಲಾಖೆಗಳ ವ್ಯಾಪ್ತಿಗಳಲ್ಲಿ ಅವುಗಳನ್ನು ತಕ್ಷಣ ಪರಿಹರಿಸಿ ನ್ಯಾಯ ಕೊಡುವ ಉದ್ದೇಶದಿಂದ ಸರಕಾರ ಜನಸ್ಪಂದನವನ್ನು ಜಾರಿಗೆ ತಂದಿದೆ. ಎಂದರು.
ಪ್ರಸ್ತಾವಿಕವಾಗಿ ತಹಶಿಲ್ದಾರ್ ಹರ್ಷವರ್ಧನ್ ಮಾತನಾಡಿ ಕಳೆದ ಬಾರಿ ನಡೆದ ಜನಸ್ಪಂದನ ಸಭೆಯಲ್ಲಿ ೮೮ ಅರ್ಜಿಗಳಿಗೂ ನ್ಯಾಯ ಕೊಡಿಸಲಾಗಿದೆ ಜಿಲ್ಲಾಡಳಿತದ ಇ ಅಫೀಸ್ ನಿಂದ ಬಂದ ೩೪೦೪ ಅರ್ಜಿಗಳಲ್ಲಿ ೨೯೦೦ ಸಮಸ್ಯೆಗಳಿಗೆ ಪರಿಹಾರ ನೀಡಲಾಗಿದೆ ಸಕಾಲದಲ್ಲಿ ಸುಮಾರು ೪೩೯೩ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದ್ದು ರಾಜ್ಯದಲ್ಲಿ ಕೋಲಾರ ಜಿಲ್ಲೆ ಮೊದಲ ಸ್ಥಾನದಲ್ಲಿ ಇದೆ ಇದಕ್ಕೆ ಕಂದಾಯ ಇಲಾಖೆ ಸಹಕಾರ ಮುಖ್ಯವಾಗಿದೆ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಅಪರ ಜಿಲ್ಲಾಧಿಕಾರಿ ಮಂಗಳ, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ಡಿವೈಎಸ್ಪಿ ನಾಗ್ತೆ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಗ್ರಾಪಂ ಅಧ್ಯಕ್ಷರು ಇದ್ದು ಸುಮಾರು ನೂರಕ್ಕೂ ಹೆಚ್ಚು ಅರ್ಜಿಗಳನ್ನು ಜನಸ್ಪಂದನ ಸಭೆಯಲ್ಲಿ ಸ್ವೀಕರಿಸಲಾಯಿತು.