ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖ:ಶಾಸಕ ಗವಿಯಪ್ಪ
ಸಂಜೆವಾಣಿ ವಾರ್ತೆ
ಹೊಸಪೇಟೆ, ಜು.13: ಮಕ್ಕಳ ಸರ್ವಾಂಗೀಣ ಬೆಳೆವಣಿಗೆಗೆ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮಖವಾಗಿದೆ ಎಂದು ಶಾಸಕ ಎಚ್.ಆರ್.ಗವಿಯಪ್ಪ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಇಲಾಖೆಯ ವತಿಯಿಂದ ನಗರದ ಟೌನ್ ರೀಡಿಂಗ್ ಹಾಲ್  ಆವರಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಫೋನ್ ವಿತರಣೆ ಮತ್ತು ಸುವಿಧ ಯೋಜನೆ ಅಡಿ ವಿಕಲಚೇತನರಿಗೆ ವಿವಿಧ ಸಲಕರಣೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು, ಮಾತನಾಡಿದರು.
ಅಂಗನವಾಡಿ ಕಾರ್ಯಕರ್ತರ ಜವಾಬ್ದಾರಿಯು ಮಹತ್ವದ್ದಾಗಿರುತ್ತದೆ. ಇಂದಿನ ಟೆಕ್ನಾಲಜಿಯೊಂದಿಗೆ ಹೊಂದಿಕೊಂಡು ಕೆಲಸ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಪೋನ್ ಉತ್ತಮ ಸಾಧನವಾಗಿದೆ. ಇದರಿಂದ ಅವರ ಕಾರ್ಯಕ್ಷಮತೆ ಹೆಚ್ಚಲಿದೆ ಎಂದರು. ಈ ವೇಳೆ ಅಂಗನವಾಡಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿ, ಸಮಸ್ಯೆ ಆಲಿಸಿದರು.
ಹುಡಾ ಅಧ್ಯಕ ಮೊಹಮ್ಮದ್ ಇಮಾಮ್ ನಿಯಾಜಿ,  ತಹಶೀಲ್ದಾರ ವಿಶ್ವಜೀತ್ ಮೆಹತಾ, ಜಿಲ್ಲಾ ನಿರೂಪಣಾಧಿಕಾರಿ ಶುಭ್ರದೇವಿ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಅವಿನಾಶ್, ತಾಪಂ ಇಒ ಹರೀಶ್ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸೇರಿ ಇತರರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಶ್ವೇತಾ ಪ್ರಸ್ತಾವಿಕವಾಗಿ ಮಾತನಾಡಿದರು. ಸಿಡಿಪಿಓ ಸಿಂಧು ಎಲೆಗಾರ್ ಸ್ವಾಗತಿಸಿದರು.