ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಿ: ಶಶಿಧರ ಕೊಸಂಬೆ ಸೂಚನೆ.
ಸಂಜೆವಾಣಿ ವಾರ್ತೆ
ಹರಪನಹಳ್ಳಿ.ಜು.೧೨: ತಾಲೂಕಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ ಆರೋಗ್ಯ ಸಿಬ್ಬಂದಿಗೆ ತಾಕೀತು ಮಾಡಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ, ಆಯುಷ್ ಡಯಾಗ್ನೋ ಸೆಂಟರ್ ಹಾಗೂ ಮಹೇಶ ನರ್ಸಿಂಗ್ ಹೋಂ, ಆಸ್ಪತ್ರೆಗಳಿಗೆ ಭೇಟಿ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಹಿಂದಿಗಿAತಲೂ ಚೇತರಿಕೆ ಕಂಡಿದ್ದು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ತಾಲೂಕಿನಲ್ಲಿ 5 ಶಂಕಿತ ಡೆಂಘೀ ಪ್ರಕರಣ ವರದಿಯಾಗಿದ್ದು 2 ಪಾಸಿಟೀವ್ ಎಂದು ದೃಢವಾಗಿವೆ, ಆದ್ದರಿಂದ ವಸತಿ ಶಾಲೆಗಳಲ್ಲಿ ಪ್ರಾಥಮಿಕ ಶಾಲೆಗಳಲ್ಲಿ ವೈದ್ಯರ ತಂಡ ರಚನೆ ಮಾಡಿಕೊಂಡು ಬೇಟಿ ನೀಡಿ ತಪಾಸಣೆ ನಡೆಸಿ ಔಷದೊಪಾಚಾರ ಮಾಡಿ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಪಟ್ಟಣದ ಮಹೇಶ ನರ್ಸಿಂಗ್ ಹೋಂ, ಹಾಗೂ ಆಯುಷ್ ಡಯಾಗ್ನೋ ಸೆಂಟರ್‌ಗೆ ಭೇಟಿ ನೀಡಿ ಪರಿಶೀಲನೆ ಮಾಡಿದಾಗ ಕೆಪಿಎಂಇ ಕಾಯ್ದೆಯ ನಿಯಮಗಳನ್ನು ಉಲ್ಲಂಘನೆ ಮಾಡಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಎರಡು ಆಸ್ಪತ್ರೆಯ ಸ್ಕಾö್ಯನಿಂಗ್ ಸೆಂಟರ್‌ಗಳನ್ನು ಸೀಜ್ ಮಾಡಲು ತಾಲೂಕು ಆರೋಗ್ಯಾಧಿಕಾರಿ ಡಾ.ಹಾಲಸ್ವಾಮಿ ಅವರಿಗೆ ಸೂಚಿಸಿದ್ದೇನೆ ಎಂದು ಶಶಿಧರ ಕೊಸಂಬೆ ತಿಳಿಸಿದರು.ತಾಲೂಕು ಆರೋಗ್ಯಾಧಿಕಾರಿಯವರು ಖಾಸಗಿ ಆಸ್ಪತ್ರಗೆ ಭೇಟಿ ನೀಡದೇ ನಿರ್ಲಕ್ಷ ವಹಿಸಿರುವ ಕಾರಣ ಅವರಿಗೂ ಕೂಡ ನೋಟಿಸ್ ನೀಡಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಜಿಲ್ಲಾ ಗರ್ಭಿಣಿ ಪ್ರಸೂತಿ ಭ್ರೂಣ ಲಿಂಗ ಪತ್ತೆ ವಿಷಯ ನಿರ್ವಾಹಕ ಧರ್ಮನಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ.ಹಾಲಸ್ವಾಮಿ, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಂಕರನಾಯ್ಕ್, ಸಹಾಯಕ ಆಡಳಿತಾಧಿಕಾರಿ ವೆಂಕಟೇಶ ಬಾಗಲರ್, ಮಕ್ಕಳ ತಜ್ಞ ದತ್ತತ್ರೇಯ ಪಿಸೆ ಸೇರಿದಂತೆ ಇತರರು ಇದ್ದರು.