ಮಕ್ಕಳ ಮನೋಭಾವ ಬದಲಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು
ಸಂಜೆವಾಣಿ ವಾರ್ತೆ               
ಚಿತ್ರದುರ್ಗ.ಜು.೧೩; ಮಕ್ಕಳ ಮನೋಭಾವ ಬದಲಿಸುವಲ್ಲಿ ಶಿಕ್ಷಕರ ಪಾತ್ರ ಹಿರಿದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಹೇಳಿದರು. ನಗರದ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಸಭಾಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಶಾಲಾ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ  ಚಿತ್ರದುರ್ಗ ತಾಲ್ಲೂಕಿನ ಪ್ರೌಢಶಾಲಾ ಮತ್ತು ಪ್ರಾಥಮಿಕ ಶಾಲಾ ವಿಜ್ಞಾನ ಶಿಕ್ಷಕರಿಗೆ ಏರ್ಪಡಿಸಿದ ಅಡ್ವಕೆಸಿ  ಸಭಾ ಕಾರ್ಯಾಗಾರ ಉಧ್ಘಾಟಿಸಿ ಅವರು ಮಾತನಾಡಿದರು.ಕೀಟಜನ್ಯ ರೋಗಗಳು ಪ್ರಪಂಚಾದ್ಯಂತ 110 ದೇಶಗಳಲ್ಲಿ ಪ್ರತಿವರ್ಷ 10 ಕೋಟಿಗೂ ಹೆಚ್ಚು ಪ್ರಕರಣಗಳು ಕಂಡುಬರುತ್ತದೆ. ಕೀಟಗಳು ಗಾತ್ರದಲ್ಲಿ ಚಿಕ್ಕದಾದರೂ ಇವುಗಳು ಹರಡುವ ಮಲೇರಿಯಾ, ಡೆಂಗ್ಯೂ, ಚಿಕನ್ ಗುನ್ಯಾ, ಮೆದುಳ ಜ್ವರ, ಆನೆಕಾಲು ರೋಗಗಳ ಪರಿಣಾಮ ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದೆ. ಸಮರ್ಥನಾ ಸಭೆಯನ್ನು  ಶಿಕ್ಷಕರಿಗೆ, ಚುನಾಯಿತ ಪ್ರತಿನಿಧಿಗಳಿಗೆ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗೆ, ಸಮುದಾಯ ಜಾಗೃತೀಕರಣ, ಗುಂಪು ಸಭೆಗಳು ನಡೆಸಿ ಅರಿವು ಮೂಡಿಸಲಾಗುತ್ತಿದೆ ಎಂದರು