ಸುಳ್ಯದಲ್ಲಿ ಯುವಕನಿಗೆ ಥಳಿಸಿದ್ದ ಪ್ರಕರಣ : ಮತ್ತೋರ್ವ ಯುವಕನ ಬಂಧನ
ಸುಳ್ಯ:ಸುಳ್ಯದಲ್ಲಿ ವಿಧ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿಯ ಜೊತೆಗೆ ಅನುಚಿತವಾಗಿ ವರ್ತಿಸಿದ ಕಾಸರಗೋಡಿನ ಅಬ್ದುಲ್ ನಿಯಾಝ್ ಮೇಲೆ ಗುಂಪು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿ ಸುಶ್ಮಿತ್ ಎಂಬಾತನನ್ನು ಕುಮಟದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೋಲಿಸರು ಆತನನ್ನು ಬಂಧಿಸಿ ಸುಳ್ಯಕ್ಕೆ ಕರೆ ತಂದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಲಯ ಆತನಿಗೆ ೧೪ ದಿನಗಳ ನ್ಯಾಯಂಗ ಬಂಧನ ವಿಧಿಸಲಾಗಿದೆ.