ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳಿಂದ ಸುಳ್ಯ ತಾಲೂಕು ಕಛೇರಿ ಎದುರು ಅನಿರ್ದಿಷ್ಟಾವಧಿ ಮುಷ್ಕರ

ಸುಳ್ಯ:ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗ್ರಾಮ ಆಡಳಿತಾಧಿಕಾರಿಗಳು ತಾಲೂಕು ಕಚೇರಿ ಮುಂಭಾಗದಲ್ಲಿ ಗುರುವಾರ ಅನಿರ್ಧಿಷ್ಠಾವಧಿ ಮುಷ್ಕರ ನಡೆಸಿದರು.
ಕಚೇರಿಗಳಲ್ಲಿ ಕೆಲಸ ನಿರ್ವಹಿಸಲು ಹಲವಾರು ಮೂಲಭೂತ ಸಮಸ್ಯೆಗಳಿದ್ದು ಮುಖ್ಯವಾಗಿ ಮೊಬೈಲ್ ಆಪ್ ಮತ್ತು ವೆಬ್ ಅಪ್ಲಿಕೇಷನ್‌ಗಳ ಮೂಲಕ ಆಗುತ್ತಿರುವ ಸಮಸ್ಯೆ, ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ಸುಮಾರು ೧೭ಕ್ಕೂ ಅಧಿಕ ಮೊಬೈಲ್/ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದು, ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಹಾಗೂ ಲ್ಯಾಪ್ ಟಾಪ್ ಹಾಗೂ ಅದಕ್ಕೆ ಅವಶ್ಯಕವಾಗಿರುವ ಇಂಟರ್ ನೆಟ್ ಹಾಗೂ ಸ್ಕ್ಯಾನರ್ ಗಳನ್ನು ಒದಗಿಸದೆ ಕರ್ತವ್ಯ ನಿರ್ವಹಿಸಲು ಒತ್ತಡ ಉಂಟಾಗುತಿದೆ. ಆದ್ದರಿಂದ ನಮಗೆ ವೃತ್ತಕ್ಕೆ ಒಂದರಂತೆ ಮೊಬೈಲ್, ಲ್ಯಾಪ್ ಟಾಪ್/ಗೂಗಲ್ ಕ್ರೋಮ್ ಬುಕ್, ಪ್ರಿಂಟರ್,ಇಂಟರ್ ನೆಟ್ ಸೌಲಭ್ಯಗಳನ್ನು ನೀಡಬೇಕು.
ಕಚೇರಿಗಳಲ್ಲಿ ಉತ್ತಮ ಗುಣಮಟ್ಟದ ಟೇಬಲ್ ಮತ್ತು ಕುರ್ಚಿ,ಮತ್ತು ಅಲ್ಮೆರ,ಅತ್ಯುತ್ತಮ ಗುಣಮಟ್ಟದ ಮೊಬೈಲ್ ಫೋನ್, ಸಿಯುಜಿ ಸಿಮ್ ಮತ್ತು ಡೇಟಾ,ಗೂಗಲ್ ಕ್ರೋಮ್ ಬುಕ್,ಲ್ಯಾಪ್ ಟಾಪ್, ಪ್ರಿಂಟರ್ ಮತ್ತು ಸ್ಕ್ಯಾನರ್ ನೀಡಬೇಕು. ಸೇವಾ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯದ ಗ್ರಾಮ ಆಡಳಿತ ಅಧಿಕಾರಿಗಳು ಪದೋನ್ನತಿಯಲ್ಲಿ ವಂಚಿತರಾಗಿ ಸುಮಾರು ೩೦ ವರ್ಷಗಳ ಮೇಲ್ಪಟ್ಟು ಪದೋನ್ನತಿಯನ್ನು ನಿವೃತ್ತಿ ಅಂಚಿನಲ್ಲಿ ಪಡೆಯುತ್ತಿರುವುದರಿಂದ, ರಾಜ್ಯಾದಲ್ಲಿನ ೧೧೯೬ ಗ್ರೇಡ್-೧ ಗ್ರಾಮ ಪಂಚಾಯಿತಿ ಹಾಗೂ ೩೦೪ ಕಸಬಾ ಹೋಬಳಿ ವೃತ್ತಗಳನ್ನು “ಗ್ರೇಡ್-೧ ಗ್ರಾಮ ಆಡಳಿತ. ಅಧಿಕಾರಿ” ಹುದ್ದೆಯನ್ನಾಗಿ ಮೇಲ್ದರ್ಜೆಗೇರಿಸಿ ರಾಜಸ್ವ ನಿರೀಕ್ಷಕರು/ಪ್ರಥಮ ದರ್ಜೆ ಸಹಾಯಕರು/ ಗ್ರೇಡ್-೧ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯನ್ನಾಗಿ ಪರೀಷ್ಕರಿಸಿ ಮೇಲ್ದರ್ಜೆಗೇರಿಸಿ ಪದೋನ್ನತಿಯನ್ನು ನೀಡಬೇಕು.
ಅಂತರ್ ಜಿಲ್ಲಾ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆಯ ಚಾಲನೆ ನೀಡಿ ಅಂತಿಮ ಆದೇಶಕ್ಕಾಗಿ ಬಾಕಿ ಇರುವ ಪ್ರಕರಣಗಳ ವರ್ಗಾವಣೆ ಆದೇಶ,ಕೆ.ಸಿ.ಎನ್.ಆರ್ ನಿಯಮಾವಳಿಗಳಂತೆ ಸರ್ಕಾರಿ ರಜಾ ದಿನಗಳಲ್ಲಿ ಕರ್ತವ್ಯಕ್ಕೆ ಮಮೋ ಹಾಕದಿರಲು ಹಾಗೂ ಮೆಮೋ ಹಾಕುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸೂಕ್ತ ಆದೇಶ ನೀಡಬೇಕು. ಕಂದಾಯ ಇಲಾಖೆಯ ತಿವರ್ಷಗಳ ಸೇವೆಯನ್ನು ಪರಿಗಣಿಸಿ ಅಂತರ್ ಜಿಲ್ಲಾ ವರ್ಗಾವಣೆಗಾಗಿ ಕಂದಾಯ ಇಲಾಖೆಯಲ್ಲಿ ಹೊಸ ಮಾರ್ಗಸೂಚಿಯನ್ನು ರಚಿಸುವುದು,ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇವ್ರತೆಯನ್ನು ರಾಜ್ಯ ಮಟ್ಟದ ಜೇಪ್ಪತೆಯನ್ನಾಗಿ ಪರಿಗಣಿಸುವ ಬಗ್ಗೆ,ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೂ ಆಗಿರುವ ಎಲ್ಲಾ ಅಮಾನತ್ತುಗಳನ್ನು ತಕ್ಷಣವೇ ರದ್ದುಪಡಿಸಿ ಹಿಂಪಡೆಯುವ ಬಗ್ಗೆ, ಪ್ರಯಾಣ ಭತ್ಯೆ ದರವನ್ನು ೫೦೦/- ರೂಗಳಿಂದ ೩೦೦೦/- ರೂಗಳಿಗೆ ಹೆಚ್ಚುವರಿ ಮಾಡುವ ಬಗ್ಗೆ,ಕೆಲಸದ ಅವಧಿಯ ಮುನ್ನ ಹಾಗೂ ಕೆಲಸದ ಮುಕ್ತಾಯದ ನಂತರ ನಡೆಸಲಾಗುವ ಎಲ್ಲಾ ಬಗೆಯ ವರ್ಚುವಲ್ ನಭೆಗಳನ್ನು ಕಡ್ಡಾಯವಾಗಿ ನಿಷೇಧಿಸುವ ಬಗ್ಗೆ,ವಿಶೇಷ ಚೇತನ ಹಾಗೂ ಕೆಲವು ಅನಾರೋಗ್ಯ ಪ್ರಕರಣಗಳನ್ನು ಹೊರತುಪಡಿಸಿ, ತಾಲ್ಲೂಕು ಕಛೇರಿ/ ಉಪವಿಭಾಗಾಧಿಕಾರಿಗಳ ಕಛೇರಿ/ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಿಯೋಜನೆ ಮೇಲೆ ಕೆಲಸ ನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಅವರ ಮೂಲ ವೃತ್ತಗಳಿಗೆ ಕರ್ತವ್ಯ ನಿರ್ವಹಿಸಲು ಆದೇಶಿಸುವ ಬಗ್ಗೆ ಈಗೆ ಹಲವಾರು ಬೇಡಿಕೆಗಳು ಇದೆ.ಅಲ್ಲದೆ ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾಭದ್ರತೆಯನ್ನು ಒದಗಿಸುವ ಬಗ್ಗೆಯೂ ಬೇಡಿಕೆ ಮುಂದಿರಿಸಲಾಗಿದೆ.
ಈ ಎಲ್ಲಾ ಬೇಡಿಕೆಗಳು ಈಡೇರುವವರೆಗೆ ಮೊಬೈಲ್ ಆಪ್ ಹಾಗೂ ವೆಬ್ ಅಪ್ಲಿಕೇಷನ್ ಅನ್ನು ಸ್ಥಗಿತಗೊಳಿಸಿ,ಲೇಖನಿ ಸ್ಥಗಿತಗೊಳಿಸುವ ಮೂಲಕ ಅನಿರ್ಧಿಷ್ಟಾವಧಿ ಮುಷ್ಕರವನ್ನು ಮಾಡಲಾಗುತಿದೆ.
ಈ ಸಂಧರ್ಭದಲ್ಲಿ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಶಿವರಾಜ್ ಗಾಯಕ್ವಾಡ್, ಗೌರವಾಧ್ಯಕ್ಷ ತಿಪ್ಪೇಶ್, ಉಪಾಧ್ಯಕ್ಷರಾದ ಶಾಹಿನಾ, ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್, ಕೋಶಾಧಿಕಾರಿ ಅಜ್ಜಯ್ಯ, ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.